×
Ad

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

Update: 2017-09-11 18:45 IST

ಮಂಗಳೂರು, ಸೆ.11: ನಗರದ ಕಾಲೇಜೊಂದರ ವಿದ್ಯಾರ್ಥಿ ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅತ್ತಾವರದ ಅಭಿಷೇಕ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇಲ್ಲಿನ ಕಾಲೇಜೊಂದರ ಪ್ರಥಮ ಬಿಬಿಎಂ ವಿದ್ಯಾರ್ಥಿಯಾಗಿರುವ ಈತ ಸೋಮವಾರ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News