ಶಶಿಕಲಾ ಜಾಮೀನಿಗೆ ಅರ್ಜಿ ಸಲ್ಲಿಕೆ ಸಾಧ್ಯತೆ
Update: 2017-09-11 19:21 IST
ಬೆಂಗಳೂರು, ಸೆ.11: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ ಪತಿ ಎಂ.ನಟರಾಜನ್ ಅವರು ಆರೋಗ್ಯ ಸ್ಥಿತಿ ಚಿಂತಾಜನಕವಾಗಿರುವ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಮೂತ್ರಪಿಂಡ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆನ್ನೈ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಂ.ನಟರಾಜನ್ ಅವರನ್ನು ನೋಡಿಕೊಳ್ಳಲು ಜಾಮೀನು ನೀಡುವಂತೆ ಶಶಿಕಲಾ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚಿಕಿತ್ಸೆ ಪಡೆಯುತ್ತಿರುವ 74 ವರ್ಷದ ನಟರಾಜನ್‌ಗೆ ರವಿವಾರ ಸುಮಾರು 8 ಗಂಟೆಗಳ ಕಾಲ ನಿರಂತರವಾಗಿ ಡಯಾಲಿಸಿಸ್ ಮಾಡಲಾಗಿದ್ದು, ಮೂತ್ರಪಿಂಡ ಹಾಗೂ ಯಕೃತ್ ವಿಫಲವಾಗಿರುವುದರಿಂದ ದಾನಿಗಳಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ತಿಳಿದು ಬಂದಿದೆ.