ಬೆಂಗಳೂರು: ವ್ಯಕ್ತಿ ಆತ್ಮಹತ್ಯೆ
Update: 2017-09-11 21:37 IST
ಬೆಂಗಳೂರು, ಸೆ.11: ಪತ್ನಿಯೊಂದಿಗೆ ಜಗಳ ಮಾಡಿಕೊಂಡು ಪತಿ ನೇಣಿಗೆ ಶರಣಾಗಿರುವ ಘಟನೆ ಇಲ್ಲಿನ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಮಹದೇವಪುರದ ಆಂಜನೇಯ ದೇವಸ್ಥಾನದ ಬಳಿ ವಾಸಿಸುತ್ತಿದ್ದ ವಿನೋದ್ ಕುಮಾರ್(31) ಆತ್ಮಹತ್ಯೆ ಮಾಡಿಕೊಂಡಿರುವ ಪತಿ ಎಂದು ಪೊಲೀಸರು ಗರುತಿಸಿದ್ದಾರೆ.
ಖಾಸಗಿ ಕಂಪೆನಿಯೊಂದರಲ್ಲಿ ಸ್ವಚ್ಛತಾ ಕೆಲಸಕ್ಕೆ ಹೋಗುತ್ತಿದ್ದ ವಿನೋದ್ ರವಿವಾರ ರಾತ್ರಿ ಪತ್ನಿ ಹೇಮಲತಾ ಅವರೊಂದಿಗೆ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದಾಗ ಮನೆಯಿಂದ ಪತ್ನಿ ಹೊರಗೆ ಹೋದ ಬಳಿಕ ವಿನೋದ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಮಹದೇವಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.