ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ಕನ್ನಡದಲ್ಲೇ ಇರಲಿ: ಕೇಂದ್ರಕ್ಕೆ ಮುಖ್ಯಮಂತ್ರಿ ಮನವಿ
Update: 2017-09-11 21:50 IST
ಬೆಂಗಳೂರು, ಸೆ.11: ಅಖಿತ ಭಾರತ ಮಟ್ಟದಲ್ಲಿ ನಡೆಯುವ ಐಬಿಪಿಎಸ್ ಬ್ಯಾಂಕಿಂಗ್ ಸೇವೆಗಳ ನೇಮಕಾತಿ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲೆ ನಡೆಸಬೇಕು ಹಾಗೂ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.
ಸೋಮವಾರ ಮೂರು ಪುಟಗಳ ಸುದೀರ್ಘ ಪತ್ರ ಬರೆದಿರುವ ಸಿದ್ದರಾಮಯ್ಯ, ಮೇಲ್ಕಂಡ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಷ್ಟೇ ನಡೆಸುವುದು ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಆದುದರಿಂದ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಬೇಕೆಂದು ಮನವಿಯಲ್ಲಿ ಕೋರಿದ್ದಾರೆ.