ಅನಾರೋಗ್ಯ: ಯುವಕ ಆತ್ಮಹತ್ಯೆ
Update: 2017-09-11 22:20 IST
ನಾಗಮಂಗಲ, ಸೆ.11: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಾಮಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿವಲಿಂಗಶೆಟ್ಟಿ ಅವರು ಪುತ್ರ ಶಶಿಕುಮಾರ್(25) ಆತ್ಮಹತ್ಯೆ ಮಾಡಿಕೊಂಡವ. ಈತ ರವಿವಾರ ತಡರಾತ್ರಿ ಜಮೀನಿನ ಬಳಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಹೊಟ್ಟೆನೋವಿನಿಂದ ಬಳಲುತ್ತಿದ್ದ ಶಶಿಕುಮಾರ್ ಹಲವಾರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗಿರಲಿಲ್ಲವೆನ್ನಲಾಗಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.