ಬಿಬಿಎಂಪಿ ಚುನಾವಣೆ;ಮತ್ತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಗೃಹ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ
Update: 2017-09-12 18:26 IST
ಬೆಂಗಳೂರು, ಸೆ.12: ಇದೇ ತಿಂಗಳು 28ರಂದು ನಡೆಯಲಿರುವ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಧಿಕಾರಕ್ಕೆ ಬರಲಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಜಾತ್ಯತೀತ ನಾಯಕರು. ಅವರ ಪಕ್ಷವು ಜಾತ್ಯತೀತ. ಹೀಗಾಗಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮುಂದುವರಿಸಲು ಸಹಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಬಾರಿಯ ಬಿಬಿಎಂಪಿ ಮೇಯರ್‌ಗೆ ಚುನಾವಣೆಯ ವಿಚಾರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ವಹಿಸಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ. ಹಾಗೇಯೇ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಕುರಿತು ಕುಮಾರಸ್ವಾಮಿ ಅವರ ಬಳಿ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದರು.