ಹನೂರು : ರಸ್ತೆ ಕಾಮಗಾರಿಗೆ ಚಾಲನೆ
ಹನೂರು,ಸೆ.13 : ಗ್ರಾಮಸ್ಥರು ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಹಕಾರದೊಂದಿಗೆ ಗುಣ ಮಟ್ಟದ ಕಾಮಗಾರಿ ಮಾಡಿಸಿಕೊಳ್ಳುವಂತೆ ತಿಳಿಸಿದರಲ್ಲದೆ, ಗುತ್ತಿಗೆದಾರರು ಕಾಮಗಾರಿಯನ್ನು 25 ವರ್ಷಗಳ ಕಾಲ ಬಾಳಿಕೆ ಬರುವಂತೆ ಉತ್ತಮ ರೀತಿಯಲ್ಲಿ ರಸ್ತೆಯನ್ನು ನಿರ್ಮಾಣ ಮಾಡುವಂತೆ ಶಾಸಕ ಆರ್.ನರೇಂದ್ರ ತಿಳಿಸಿದರು.
ಹನೂರು ಕ್ಷೇತ್ರ ವ್ಯಾಪ್ತಿಯ ಭದ್ರಯ್ಯನಹಳ್ಳಿ ಹಾಗೂ ಬೂದುಬಾಳು ಗ್ರಾಮದಲ್ಲಿ ಗ್ರಾಮ ವಿಕಾಸ ಯೋಜನೆಯಡಿ ಸುಮಾರು 43.86 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಅವರು ಮಾತನಾಡಿದರು.
ಬಲಿಜಗ ಜನಾಂಗದ ಸಮುದಾಯ ಭವನ ನಿರ್ಮಾಣ : ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 132 ಸಮುದಾಯ ಭವನಗಳನ್ನು ನಿರ್ಮಾಣ ಮಾಡಿದ್ದು, ಈ ಗ್ರಾಮದ ಬಲಿಜಿಗ ಜನಾಂಗಕ್ಕೆ ಸಮುದಾಯ ಭವನಕ್ಕಾಗಿ ಮಂತ್ರಿಗಳಿಗೆ ಮನವಿ ಮಾಡಿದ್ದು, ಮಲೈನಾಡ ಅಭಿವೃದ್ದಿ ನಿಗಮ ವತಿಯಿಂದ ಮೊದಲ ಹಂತವಾಗಿ 50 ಲಕ್ಷ ರೂ.ಗಳನ್ನು ನೀಡಿದ್ದು, ಅಕ್ಕಪಕ್ಕದ ಹಳ್ಳಿಗಳನ್ನು ಒಟ್ಟಾಗಿ ಒಂದುಕಡೆ ಸೇರಿಸಿ 1 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ಕ್ರಮ ಕೈಗೊಂಡಿಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ್ ಅಧ್ಯಕ್ಷ ರಾಜು, ಟಿ.ಎ.ಪಿ.ಎಂ.ಸಿ ಅಧ್ಯಕ್ಷ ಮೆಹಬೂಬ್ ಷೆರೀಫ್, ಗ್ರಾಮ ಫಂಚಾಯತ್ ಅಧ್ಯಕ್ಷ ಶಾಂತರಾಜು, ಉಪಾಧ್ಯಕ್ಷೆ ಮಹಾದೇವಮ್ಮ, ಟಿ.ಎ.ಪಿ.ಎಂ.ಸಿ ಅಧ್ಯಕ್ಷ ಮೆಹಬೂಬ್ ಪಟ್ಟಣ ಪಂಚಾಯತ್ ಮಾಜಿ ಅದ್ಯಕ್ಷರಾದ ರಾಜೂಗೌಡ ಮುಖಂಡರಾದ ಪುಟ್ಟರಾಜು, ಗ್ರಾಮಸ್ಥರು ಮತ್ತು ಇನ್ನಿತರರು ಉಪಸ್ಥಿತರಿದ್ದರು.