ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Update: 2017-09-13 15:00 GMT

ಬೆಂಗಳೂರು, ಸೆ.13: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18ನೆ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್‌ವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ kareepass.cgg.gov.in ಹಾಗೂ www.backwardclasses. kar.nic.in ನಲ್ಲಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾತಿಗಾಗಿ ವೆಬ್‌ಸೈಟ್ www.backwardclasses.kar. nic.inನಲ್ಲಿ ನೋಡಬಹುದು. ದೂರವಾಣಿ ಸಂಖ್ಯೆ 080-65970005 ಹಾಗೂ 080-65970006 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News