ಸೆ. 16: ರೆಡ್‌ಕ್ರಾಸ್ ವಾರ್ಷಿಕ ಮಹಾಸಭೆ
Update: 2017-09-13 21:51 IST
ಉಡುಪಿ, ಸೆ.13: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆ ಸೆ.16ರಂದು ಬೆಳಗ್ಗೆ 10 ಕ್ಕೆ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಂಟ್ ಹಾಲ್‌ನಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಇದರಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಪೋಷಕ, ಉಪಪೋಷಕ ಮತ್ತು ಅಜೀವ ಸದಸ್ಯರೆಲ್ಲರೂ ತಪ್ಪದೇ ಭಾಗವಹಿಸುವಂತೆ ರೆಡ್‌ಕ್ರಾಸ್ ಸಂಸ್ಥೆ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.