×
Ad

ಒತ್ತಡ ಕಡಿಮೆ ಮಾಡಲು ಕ್ರೀಡೆ ಸಹಾಯಕ:ಡಾ.ಉಮೇಶ್ ಪ್ರಭು

Update: 2017-09-13 22:03 IST

ಉಡುಪಿ, ಸೆ.13: ದೈನಂದಿನ ಜೀವನದಲ್ಲಿ ಮಕ್ಕಳು, ವಯಸ್ಕರು ಹಾಗೂ ಹಿರಿಯ ನಾಗರಿಕರಿಗೆ ಒತ್ತಡವನ್ನು ಕಡಿಮೆ ಮಾಡುವಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹಾಯಕವಾಗುತ್ತವೆ ಎಂದು ಉಡುಪಿ ರೆಡ್‌ಕ್ರಾಸ್ ಅಧ್ಯಕ್ಷ ಡಾ.ಉಮೇಶ್ ಪ್ರಭು ಹೇಳಿದ್ದಾರೆ.

ಉಡುಪಿಯ ರೆಡ್‌ಕ್ರಾಸ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತರು ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಮಂಗಳವಾರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಿಲ್ಲೆಯ ಹಿರಿಯ ನಾಗರಿಕರಿಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ಸಭಾ ಕಾರ್ಯಕ್ರಮದಲ್ಲಿ ತೀರ್ಪುಗಾರರಿಗೆ ಕ್ರೀಡಾ ಸಲಕರಣೆಗಳನ್ನು ವಿತರಿಸಿ ಮಾತನಾಡುತಿದ್ದರು.

ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ ಎಂದು ಉಮೇಶ್ ಪ್ರಭು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್, ಕ್ರೀಡಾಕೂಟದ ತೀರ್ಪುಗಾರರಾದ ಸೋಮಪ್ಪ ತಿಂಗಳಾಯ, ರವಿ ಪ್ರಸಾದ್ ಹಾಗೂ ಹಿರಿಯ ನಾಗರಿಕರ ಪ್ರತಿನಿಧಿಗಳು ಉಪಸ್ಥಿತರಿದ್ದರು. ಜಿಲ್ಲಾ ವಿಕಲಚೇತನ ಇಲಾಖೆಯ ಅಧಿಕಾರಿ ನಿರಂಜನ ಭಟ್ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News