ಮೈಸೂರು ದಸರಾ ಕನ್ನಡ ಪುಸ್ತಕ ಮೇಳ

Update: 2017-09-13 16:36 GMT

ಉಡುಪಿ, ಸೆ.13: ಈ ಬಾರಿಯ ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಸೆ.21ರಿಂದ 29ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮೇಳ-2017ನ್ನು ಮೈಸೂರಿನಲ್ಲಿ ಏರ್ಪಡಿಸಲಾಗಿದೆ.

ಈ ಪುಸ್ತಕ ಮೇಳದಲ್ಲಿ ಪ್ರಕಾಶಕರು/ಮಾರಾಟಗಾರರು ಭಾಗವಹಿಸ ಬಹುದಾಗಿದ್ದು, ಮಳಿಗೆಯೊಂದಕ್ಕೆ 2,000ರೂ.ಗಳ ದ್ರತಾ ಠೇವಣಿ ಡಿ.ಡಿ ಯನ್ನು ಆಡಳಿತಾಧಿಕಾರಿಗಳು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸಬೇಕು.

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ -www.kannadapusthakapradhikara.com-ನಲ್ಲಿ ಅರ್ಜಿಯನ್ನು ಉಚಿತವಾಗಿ ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಡಿಡಿಯೊಂದಿಗೆ ಸೆ.18ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು ಇವರಿಗೆ ಅಂಚೆಯ ಮೂಲಕ ಕಳುಹಿಸಬಹುದು ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು-560002 (ದೂರವಾಣಿ:080-22484516/22107704) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News