ಬಸವರಾಜು ಛಲವಾದಿ

Update: 2017-09-13 17:43 GMT

ಮೂಡಿಗೆರೆ, ಸೆ.13: ಸಾರಿಗೆ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಬಸವರಾಜು ಛಲವಾದಿ (42) ಅವರು ಅನಾರೋಗ್ಯದ ಕಾರಣದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ.

ಮೂಡಿಗೆರೆ ಸಾರಿಗೆ ಘಟಕದಲ್ಲಿ ಕಳೆದ ಹಲವು ವರ್ಷಗಳಿಂದ ಬಸ್ ನಿರ್ವಾಹಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಬಳಿಕ ಪಟ್ಟಣದ ನೂತನ ಬಸ್ ನಿಲ್ದಾಣ ಉದ್ಘಾಟನೆಯಾದ ನಂತರ ನಿಲ್ದಾಣದ ಗೇಟಿನ ಚೌಕಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ 10 ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.  ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೇಶಿವನಗುತ್ತಿ ಗ್ರಾಮದವರಾಗಿದ್ದು, ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೃತ ದೇಹವನ್ನು ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಕೆಲ ಸಮಯ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಅವರ ಹುಟ್ಟೂರಿಗೆ ಮೃತ ದೇಹವನ್ನು ಕೊಂಡೊಯ್ಯಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ