ಉತ್ತಮ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ
Update: 2017-09-14 20:15 IST
ಶಿರ್ವ, ಸೆ.14: ಬಂಟಕಲ್ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್‌ನ 7ನೆ ಸೆಮಿಸ್ಟರ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಅಭಿನವ್ ಕರಬ ಐಎಸ್‌ಟಿಇ ಕರ್ನಾಟಕ ರಾಜ್ಯ ವಿಭಾಗದ 2017ನೆ ಸಾಲಿನ ಉತ್ತಮ ವಿದ್ಯಾರ್ಥಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ದಾವಣಗೆರೆಯ ಜಿ.ಎಂ ತಾಂತ್ರಿಕ ಶಿಕ್ಷಣ ಅಕಾಡೆಮಿಯಲ್ಲಿ ಇತ್ತೀಚೆಗೆ ಜರಗಿದ 14ನೆ ರಾಜ್ಯ ಮಟ್ಟದ ವಿದ್ಯಾರ್ಥಿ ಸಮಾವೇಶದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸತತವಾಗಿ ಮೂರನೇ ಬಾರಿಗೆ ಈ ಪ್ರಶಸ್ತಿಯು ಬಂಟಕಲ್ ವಿದ್ಯಾ ಸಂಸ್ಥೆಗೆ ದೊರೆತಿದೆ ಎಂದು ಪ್ರಕಟಣೆ ತಿಳಿಸಿದೆ.