×
Ad

ಅನುಮತಿ ಇಲ್ಲದೆ ಪ್ರತಿಭಟನೆ: ಹಿಂಜಾವೇ ಕಾರ್ಯಕರ್ತರ ಬಂಧನ

Update: 2017-09-14 22:03 IST

ಕುಂದಾಪುರ, ಸೆ.14: ವಿವಾಹಕ್ಕೆ ತೆರಳಿದ್ದ ವಿದ್ಯಾರ್ಥಿಗಳ ಕಾರನ್ನು ಕೋಟೇಶ್ವರದಲ್ಲಿ ತಡೆದು ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಠಾಣಾಧಿಕಾರಿ ವಿರುದ್ಧ ಅನುಮತಿ ಇಲ್ಲದೆ ಇಂದು ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಮುಂದಾದ ಹಿಂಜಾವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ವಿದ್ಯಾರ್ಥಿಗಳನ್ನು ತಡೆದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಠಾಣಾಧಿಕಾರಿ ನಾಸೀರ್ ಹುಸೇನ್ ಕಾನೂನು ಕೈಗೆತ್ತಿಕೊಂಡ ಹಿಂಜಾವೇ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದರು. ಈ ವಿಚಾರವನ್ನು ಮುಂದಿಟ್ಟು ಕೊಂಡು ಹಿಂಜಾವೇ ಮುಖಂಡರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ಇದಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೂ ಪ್ರತಿಭಟನೆ ನಡೆಸಲು ಮುಂದಾದ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಜಿಲ್ಲಾ ಎಸ್ಪಿಡಾ. ಸಂಜೀವ ಪಾಟೀಲ್ ಕುಂದಾಪುರಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ವೃತ್ತ ನಿರೀಕ್ಷಕ ಮಂಜಪ್ಪ, ಠಾಣಾಧಿಕಾರಿ ನಾಸೀರ್ ಹುಸೇನ್ ನೇತೃತ್ವದಲ್ಲಿ ಕೆಎಸ್‌ಆರ್‌ಪಿ, ಡಿಎಆರ್ ತುಕಡಿ ಹಾಗೂ ನೂರಾರು ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News