ಬಸ್ ಉರುಳಿ ಬಿದ್ದು ಪ್ರಯಾಣಿಕರಿಗೆ ಗಾಯ
Update: 2017-09-15 23:05 IST
ತುಮಕೂರು, ಸೆ.15: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಲಕ್ಕೆ ಉರುಳಿ ಬಿದ್ದ ಪರಿಣಾಮ ಎಂಟು ಮಂದಿ ಗಾಯಗೊಂಡಿರುವ ಘಟನೆ ಮಧುಗಿರಿ ಹೊರವಲದಯದ ಕೆರೆಗಳ ಪಾಳ್ಯ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗಡಿನ ತಡೆಗೋಡೆಯನ್ನು ದಾಟಿ ಜಮೀನಿಗೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್‍ನಲ್ಲಿ 8 ಜನ ಪ್ರಯಾಣಿಕರಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಗಂಭೀರವಾಗಿ ಗಾಯಗೊಂಡವರನ್ನು ತುಮಕೂರಿನ ಜಿಲ್ಲಾಸ್ಪತ್ರೆ ಹಾಗೂ ಬೆಂಗಳೂರಿನ ನಿಮ್ಹಾನ್ಸ್ ಗೆ ದಾಖಲಿಸಲಾಗಿದೆ.
ಮಧುಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಜರಗಿಸಿದ್ದಾರೆ.