ಮಕ್ಕಳ ಮನೋವಿಕಾಸದಲ್ಲಿ ಕ್ರೀಡೆಯ ಪಾತ್ರ ಪ್ರಮುಖ: ಕೆ.ಎನ್.ಗಾವುಡಿ

Update: 2017-09-16 13:43 GMT

ಸಾಗರ, ಸೆ.16: ಮಕ್ಕಳ ಮನೋವಿಕಾಸದಲ್ಲಿ ಕ್ರೀಡೆಯ ಪಾತ್ರ ಪ್ರಮುಖವಾಗಿದೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಎನ್.ಗಾವುಡಿ ಹೇಳಿದರು.

ಇಲ್ಲಿನ ನೆಹರು ಮೈದಾನದಲ್ಲಿ ತಾಲೂಕು ಭಡ್ತಿ ಮುಖ್ಯಶಿಕ್ಷಕರ ಸಂಘ ಏರ್ಪಡಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದ ಸಮಾರೋಪದಲ್ಲಿ ಶುಕ್ರವಾರ ಸಂಘದ ವತಿಯಿಂದ ನೀಡಲಾದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸಲು ಕ್ರೀಡೆ ಸಹಕಾರಿಯಾಗಿದೆ. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಕ್ರೀಡೆಯ ಬಗ್ಗೆ ಆಸಕ್ತಿಯನ್ನು ಬೆಳೆಸಬೇಕಾಗಿದೆ. ಮಕ್ಕಳು ಬೌದ್ಧಿಕ ಬೆಳವಣಿಗೆ ಜೊತೆಗೆ ದೈಹಿಕವಾಗಿ ಸದೃಢವಾಗಲು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸವಂತಹ ಕಾರ್ಯವನ್ನು ಶಿಕ್ಷಕರು ಹಾಗೂ ಪೋಷಕರು ಮಾಡಬೇಕಾಗಿದೆ ಎಮದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಡ್ತಿಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಟಿ.ಸ್ವಾಮಿ ಮಾತನಾಡಿ, ಇಂದಿನ ಮಕ್ಕಳಲ್ಲಿ ಸಾಕಷ್ಟು ಪ್ರತಿಭಾವಂತರಿದ್ದು, ಅಂತಹವರನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಕಾರ್ಯ ಆಗಬೇಕಿದೆ. ಬಹುತೇಕ ಕ್ಷೇತ್ರಗಳಲ್ಲಿ ರಾಜಕೀಯ ಮತ್ತು ಜಾತಿ ಪ್ರಮುಖವಾಗಿ ಬರುತ್ತಿರುವುದರಿಂದ ಪ್ರತಿಭಾವಂತರಿಗೆ ಅನ್ಯಾಯವಾಗುತ್ತಿದೆ. ಅಂತಹ ವಿಷವರ್ತುಲದಿಂದ ಹೊರಬರಬೇಕಾದ ಅವಶ್ಯಕತೆ ಇದೆ ಎಂದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಿಂಗನಗೌಡ, ಭಡ್ತಿ ಮುಖ್ಯಶಿಕ್ಷಕರ ಸಂಘದ ಕೆ.ಕೆ.ಚನ್ನಪ್ಪ, ಶೈಲಜ, ನಾಗರಾಜ್, ಮಾಲಿನಿ ಹೆಗಡೆ, ಸತ್ಯಪ್ಪ, ರಮೇಶ್ ನಾರಾಯಣ, ಬೂದ್ಯಪ್ಪ, ವೆಂಕಟೇಶ್, ರವೀಂದ್ರ, ಚಂದ್ರಪ್ಪ, ಪ್ರಭು ಇ.ಎನ್, ಶೋಭಾ, ದೈಹಿಕ ಶಿಕ್ಷಕ ಪುರುಷೋತ್ತಮ, ಗುರುಮೂರ್ತಿ, ಪಾರ್ವತಿ, ಮೊದಲಾದವರು ಉಪಸ್ಥಿತರಿದ್ದರು, ಎಂ.ಪಿ.ಸತ್ಯನಾರಾಯಣ ಕಾರ್ಯಕ್ರಮ ನಿರ್ವಹಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News