×
Ad

ಯುಪಿಎಸ್‌ಸಿ ಉತ್ತೀರ್ಣರಾಗಲು ಇಚ್ಛಾಶಕ್ತಿ ಮುಖ್ಯ: ಡಿಸಿ ಪ್ರಿಯಾಂಕ

Update: 2017-09-16 19:31 IST

ಉಡುಪಿ, ಸೆ.16: ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕಾದರೆ ಕೇವಲ ಬುದ್ದಿವಂತರಾಗಿದ್ದರೆ ಸಾಲದು, ಮುಖ್ಯವಾಗಿ ಇಚ್ಛಾಶಕ್ತಿ ಬೇಕಾಗಿರುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಯುಪಿಎಸ್‌ಸಿ/ಕೆಪಿಎಸ್‌ಸಿ ಕಾರ್ಯಾಗಾರವನ್ನು ನಗರದ ಕೇಂದ್ರ ಗ್ರಂಥಾಲಯದಲ್ಲಿ ಶನಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಾಗರಿಕ ಸೇವಾ ಪರೀಕ್ಷೆಗಳಿಗೆ ಜಿಲ್ಲೆಯ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಏರ್ಪಡಿಸಿ, ಅದರಲ್ಲಿ ಉತ್ತೀರ್ಣರಾದ ಆಸಕ್ತ 50 ಅಭ್ಯಥಿಗಳಿಗೆ ಜಿಲ್ಲಾಡಳಿತದ ವತಿಯಿಂದ ಉಚಿತ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳು ಬುದ್ದಿವಂತಿಕೆಯ ಜೊತೆಗೆ ಸಾಧಿಸುವ ಛಲ, ಮಹತ್ವಾಕಾಂಕ್ಷೆ ಹೊಂದಿದ್ದರೆ ಪರೀಕ್ಷೆಯಲ್ಲಿ ಯಶಸ್ಸು ಪಡೆಯಬಹುದು ಎಂದರು.

ಜಿಲ್ಲಾ ಗ್ರಂಥಾಲಯದಲ್ಲಿ ಪ್ರಾರಂಭಿಸಿರುವ ಈ ತರಬೇತಿ ಕೇಂದ್ರದಲ್ಲಿ ಪರೀಕ್ಷೆಗೆ ಅಗತ್ಯವಿರುವ ಪುಸ್ತಕಗಳ ಒದಗಿಸಲಾಗುವುದು. ಅಭ್ಯರ್ಥಿಗಳಿಗಾಗಿ ಇಂಟರ್ನೆಟ್ ಸಂಪರ್ಕದೊಂದಿಗೆ 5 ಕಂಪ್ಯೂಟರ್‌ಗಳನ್ನು ಅಳವಡಿಸಲಾಗು ವುದು. ಪ್ರತಿದಿನ ಪತ್ರಿಕೆಗಳನ್ನು ಓದಿ ಪ್ರಚಲಿತ ವಿದ್ಯಾಮಾನಗಳನ್ನು ಅರಿತುಕೊಳ್ಳ ಬೇಕು. ನಾಗರಿಕ ಸೇವಾ ಪರೀಕ್ಷೆಯಲ್ಲಿ ಎದುರಿಸುವ ಪ್ರಯತ್ನಗಳು ಮುಖ್ಯವಲ್ಲ, ನಾಗರಿಕ ಸೇವೆಗೆ ಆಯ್ಕೆಯಾಗುವುದು ಮುಖ್ಯ. ನಮ್ಮಲ್ಲಿರುವ ಸರಕಾರಿ ಅಧಿಕಾರಿಗಳ ಕೊರತೆಯನ್ನು ನೀಗಿಸುವ ಪ್ರಯತ್ನ ಇದಾಗಿದೆ ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂವಿತಾ, ಉಡುಪಿ ಅಬಕಾರಿ ಇಲಾಖೆಯ ಡೆಪ್ಯುಟಿ ಕಮಿಷನರ್ ಮೇರುನಂದನ, ಡಾ.ಬಿ.ಆರ್.ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸಾ್ಥಪಕ ದೇವರಾಜ್ ಉಪಸ್ಥಿತರಿದ್ದರು.

ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ. ಸ್ವಾಗತಿಸಿದರು. ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ. ವಂದಿಸಿದರು. ಪ್ರಥಮ ದರ್ಜೆ ಸಹಾಯಕಿ ಪ್ರೇಮ ಎಂ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News