ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಸಿ.ಪುಟ್ಟರಂಗಶೆಟ್ಟಿ
ಚಾಮರಾಜನಗರ, ಸೆ.16: ತಾಲೂಕಿನ ಬಂದಿಗೌಡನಹಳ್ಳಿ ಗ್ರಾಮದಲ್ಲಿ ಬಸ್ ನಿಲ್ದಾಣ ಕಾಮಗಾರಿ ಹಾಗೂ ನೂತನವಾಗಿ ನಿರ್ಮಿಸಲಾಗುತ್ತಿರುವ ಬಂದೇಶ್ವರಸ್ವಾಮಿಯ ದೇವಸ್ಥಾನ ನಿರ್ಮಾಣಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಈಗಾಗಲೇ ಗ್ರಾಮೀಣ ಪರಿಮಿತಿ ಯೋಜನೆಯಡಿ ಮುಖ್ಯರಸ್ತೆಯಿಂದ ಬಿಸಿಲವಾಡಿ ಗ್ರಾಮಕ್ಕೆ 1ಕೋ.ಟಿ.ರೂ ಹಣ ಬಿಡುಗಡೆಯಾಗಿದ್ದು, ಈ ಸಂಬಂಧ ಟೆಂಡರ್ ಮುಗಿಯುವ ಹಂತದಲ್ಲಿದ್ದು ಶೀಘ್ರವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು.
ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯವಿರು ಕಡೆ ಬಸ್ ನಿಲ್ದಾಣ, ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು ಕ್ಷೇತ್ರದ ಜನರಿಗೆ ಅಗತ್ಯವಾಗಿ ಬೇಕಾದ ರಸ್ತೆ, ಚರಂಡಿ, ಕುಡಿಯುವ ನೀರು, ವಸತಿ, ದೇವಸ್ಥಾನ ಸೇರಿದಂತೆ ಇನ್ನಿತರ ಸೌಕರ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರತಿಯೊಂದು ಗ್ರಾಮಗಳಿಗೂ ಕಲ್ಪಿಸುತ್ತಿರುವುದಾಗಿ ಹೇಳಿದರು.
ಈ ಮೂಲಕ ಕ್ಷೇತ್ರದ ಜನತೆಯ ಬಹು ನಿರೀಕ್ಷಿತ ಕುಡಿಯುವ ನೀರು ಯೋಜನೆಯಿಂದ ಜನರ ಸಂಕಷ್ಟ ನಿವಾರಣೆಯಾಗಲಿದ್ದು,ಇದಕ್ಕೆ ಪೂರಕವಾಗಿ ಈ ದಿನಗಳಲ್ಲಿ ಹಿಂಗಾರು ಮಳೆ ಉತ್ತಮವಾಗಿ ಬೀಳುತ್ತಿದ್ದು ತಾಲೂಕಿನ ಕೆರೆ-ಕಟ್ಟೆಗಳು ತುಂಬುತ್ತಿರುವುದು ನಾಗರಿಕರು ಹಾಗೂ ರೈತರಿಗೆ ಸಂತಸ ಉಂಟುಮಾಡಿದೆ ಎಂದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಶಶಿಕಲಾ ಸೋಮಲಿಂಗಪ್ಪ, ತಾ.ಪಂ ಸದಸ್ಯೆ ರತ್ನಮ್ಮ, ಎಪಿಎಂಸಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಗ್ರಾಪಂ ಅಧ್ಯಕ್ಷ ಮಹದೇವಪ್ಪ ಸದಸ್ಯರಾದ ನೀಲಮ್ಮ, ಪ್ರಭುಸ್ವಾಮಿ, ಮುಖಂಡರಾದ ಗೌಡಿಕೆ ಶಿವಣ್ಣ, ದೊರೆಸ್ವಾಮಿ ಹಾಗೂ ಗ್ರಾಮಸ್ಥರು ಹಾಜರಿದ್ದರು.