ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ: ಆಳ್ವಾಸ್ ಚಾಂಪಿಯನ್
Update: 2017-09-16 23:25 IST
ಮೂಡುಬಿದಿರೆ, ಸೆ. 16: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಕಲ್ಲಡ್ಕದ ಶ್ರೀರಾಮ ಪಿಯು ಕಾಲೇಜಿನ ಆಶ್ರಯದಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ಆಳ್ವಾಸ್ ಪಿಯು ಕಾಲೇಜಿನ ಯೋಗಪಟುಗಳು ಹುಡುಗರ ವಿಭಾಗದಲ್ಲಿ ಚಾಂಪಿಯನ್ ಆಗಿ ಮೂಡಿ ಬಂದಿದ್ದಾರೆ.
ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿ ವೀರಭದ್ರ, ನಾಲ್ಕನೇ ಸ್ಥಾನ ಪಡೆದ ನಾಗರೇಶ್ ಹಾಗೂ ರಿದೆಮಿಕ್ ಯೋಗದಲ್ಲಿ ಪ್ರಥಮ ಸ್ಥಾನ ಪಡೆದ ತರುಣ್, ಚಿತ್ರದುರ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.