ವೃತ್ತಿ ನಿರೂಪಣಾ ಕೌಶಲ್ಯ/ವ್ಯಕ್ತಿವಿಕಸನ ತರಬೇತಿಗೆ ಅರ್ಜಿ ಆಹ್ವಾನ

Update: 2017-09-17 16:04 GMT

ಮಂಗಳೂರು, ಸೆ. 17: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕೋದ್ಯಮ ಪದವಿ, ಸ್ನಾತಕೋತ್ತರ ಪದವಿ, ವಿದ್ಯುನ್ಮಾನ ಮಾಧ್ಯಮದಲ್ಲಿ ಪದವಿ, ಪಿ.ಜಿ. ಡಿಪ್ಲೊಮಾ ಪಡೆದ ಅಭ್ಯರ್ಥಿಗಳಿಗಾಗಿ ಆರು ದಿವಸಗಳ ವೃತ್ತಿ ನಿರೂಪಣಾ ಕೌಶಲ್ಯ/ವ್ಯಕ್ತಿವಿಕಸನ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ಭಾಗದಿಂದ ಅರ್ಜಿ ನಮೂನೆಯನ್ನು ಪಡೆಯಬಹುದು. ಇಲ್ಲವೆ ಇಲಾಖೆಯ ವೆಬ್‌ಸೈಟ್  www.karnatakainforamtion.gov.in  ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ, ಶೇಕಡಾವಾರು ಅಂಕ, ಉದ್ಯೋಗ ವಿವರ, ಈ ಹಿಂದೆ ಯಾವುದಾದರು ತರಬೇತಿ ಪಡೆದ ವಿವರ ಹಾಗೂ ವಿಶೇಷ ಸಾಧನೆಗಳನ್ನೊಳಗೊಂಡ ಸ್ವ ವಿವರಗಳ ಮಾಹಿತಿಗಳನ್ನು ಭರ್ತಿ ಮಾಡಿ ಸ್ವ ವಿಳಾಸ ಇರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಯೊಂದಿಗೆ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ಧೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ಸೆ.21ರೊಳಗೆ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸುದ್ದಿ ಮತ್ತು ಪತ್ರಿಕಾ ವಿಭಾಗದ, ಉಪ ನಿರ್ದೇಶಕರು ಇವರನ್ನು ದೂರವಾಣಿ ಸಂಖ್ಯೆ 080- 22028037/87 ರ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News