ಹಿರಿಯ ನಾಗರಿಕರಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ
Update: 2017-09-18 19:53 IST
ಉಡುಪಿ, ಸೆ.18: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ ಅ.1ರಂದು ನಡೆಯುವ ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಂದು ಸಮಾಜ ಸೇವೆ, ಕಲೆ, ಕ್ರೀಡೆ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಮಾಡಿದ ಹಿರಿಯ ನಾಗರಿಕರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ತಲಾ ಒಬ್ಬರಂತೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆಮಾಡಿದ ಒಂದು ಸಂಸ್ಥೆಯನ್ನು ಸನ್ಮಾನಿಸಲಾಗುವುದು.
ಈಗಾಗಲೇ ಈ ಇಲಾಖೆಯಿಂದ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ. ಆಸಕ್ತರು ಸೆ.25ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಕಛೇರಿ, ಸಿಬ್ಲಾಕ್, ತಳಅಂತಸ್ತು, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ(ದೂರವಾಣಿ:0820-2574810/811) ಇಲ್ಲಿಗೆ ಪ್ರಸ್ತಾವನೆ ಗಳನ್ನು ಸಲ್ಲಿಸುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ.