ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಶಮ್ಸ್ ಶಾಲೆ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ
Update: 2017-09-18 19:57 IST
ಭಟ್ಕಳ, ಸೆ. 18: ಇಲ್ಲಿನ ಪ್ರತಿಷ್ಠಿತ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಅಬ್ದುಲ್ ಲತೀಫ್ ಶೇಖ್ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಸೋಮವಾರ ತಾಲೂಕಿನ ಸರಕಾರಿ ಪ್ರೌಢಶಾಲೆ ಬೆಳಕೆಯಲ್ಲಿ ಜರಗಿದ ಉತ್ತರ ಕನ್ನಡ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ್ದ ಲತೀಫ್ ತನ್ನ ಉತ್ತಮ ಪ್ರದರ್ಶನದ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ, ಮುಖ್ಯಾಧ್ಯಾಪಕ ಎಂ.ಆರ್.ಮಾನ್ವಿ, ದೈಹಿಕ ಶಿಕ್ಷಣ ಶಿಕ್ಷಕ ಮಹೇಶ ನಾಯ್ಕ ಅಭಿನಂದಿಸಿದ್ದು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಗಳಿಸುವುದರ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಹಾರೈಸಿದ್ದಾರೆ.