×
Ad

ಬಾಗೇಪಲ್ಲಿ : ವಿವಿಧ ಕಾಮಗಾರಿಗಳಿಗೆ ಚಾಲನೆ

Update: 2017-09-18 20:00 IST

ಬಾಗೇಪಲ್ಲಿ,ಸೆ.18: ಬಾಗೇಪಲ್ಲಿ ತಾಲ್ಲೂಕಿನ  ಗೂಳೂರು ಹೋಬಳಿಯ ತಿಮ್ಮಂಪಲ್ಲಿ, ಗೂಳೂರು, ಮಾರ್ಗಾನುಕುಂಟೆ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ಚರಂಡಿ ಕಾಮಗಾರಿ, ಸಿಸಿ ರಸ್ತೆಗಳು ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಿದ್ದು, ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಕನಿಷ್ಠ ಮೂಲಭೂತ ಸೌಲಭ್ಯಗಳು ಕಲ್ಪಿಸುವ ಗುರಿ ನನಗೆ ಇದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. 

ತಾಲ್ಲೂಕಿನ ಗೂಳೂರು ಹೋಬಳಿಯ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತಾಲ್ಲೂಕಿನ  ದೇವಿಕುಂಟೆ, ತಟ್ಟನ್ನಗಾರಿಪಲ್ಲಿ, ಎಂ.ಚರ್ಲೋಪಲ್ಲಿ, ಮಾರ್ಗಾನುಕುಂಟೆ, ಜೋಗಿರೆಡ್ಡಿಪಲ್ಲಿ, ಚಿಂತಮಾಕಲದಿನ್ನೆ, ಬೊಮ್ಮಯ್ಯಗಾರಿಪಲ್ಲಿ, ಜಿ.ಮದ್ದೇಮಪಲ್ಲಿ, ಜಿಗಿನೇವಾಂಡ್ಲಪಲ್ಲಿ, ಸದ್ದಪಲ್ಲಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ಸಿ.ಸಿ ರಸ್ತೆ, ಚರಂಡಿ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಲಾಗಿದೆ ಎಂದು ತಿಳಿಸಿದರು. 

ಭೂಮಿ ಪೂಜೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ನರಸಿಂಹಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್.ನರೇಂದ್ರಬಾಬು, ಲೋಕೋಪಯೋಗಿ ಇಲಾಖೆ ಎಇಇ.ಲಕ್ಷ್ಮೀ, ಎಇ.ಜಿ.ಎನ್.ಪೂಜಪ್ಪ, ಮಾಜಿ ಅಧ್ಯಕ್ಷ ಹಾಗೂ ಮುಖಂಡ ಗೂಳೂರುರಮೇಶ್‍ಬಾಬು, ಕೆಡಿಪಿ ಸದಸ್ಯ ಅಮರನಾಥರೆಡ್ಡಿ, ಗೂಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನ್ನಾಖಾನ್, ಕೊತ್ತಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟರೆಡ್ಡಿ, ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು, ಮುಖಂಡರು ಹಾಜರಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News