ಯಡಿಯೂರಪ್ಪ ಬಿಜಾಪುರದಿಂದ ಸ್ಪರ್ಧಿಸಲಿ: ಬೆಳ್ಳುಬ್ಬಿ
ಬೆಂಗಳೂರು, ಸೆ. 18: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ ಪಕ್ಷದಲ್ಲಿ ಬಹುಮತದಿಂದ ಅವರನ್ನು ಆಯ್ಕೆ ಮಾಡಿ ವಿಧಾನಸೌಧಕ್ಕೆ ಕಳಿಸಿಕೊಡುತ್ತೇವೆ ಎಂದು ಮಾಜಿ ಸಚಿವ ಹಾಗೂ ಬಿಜಾಪುರ ಜಿಲ್ಲೆಯ ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ತಿಳಿಸಿದ್ದಾರೆ.
ನಗರದಲ್ಲಿಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿಜಾಪುರ ಜಿಲ್ಲೆಗಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ನೀಡಿದ್ದಾರೆ. ಜಿಲ್ಲೆಯಲ್ಲಿ ಅನೇಕ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ ಎಂದು ಹೇಳಿದರು.
ರಾಜ್ಯ ಸರಕಾರ ಬಿಜಾಪುರ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ನಮ್ಮ ಜಿಲ್ಲೆಗಾಗಿ ಮಾಡಿರುವ ಹಲವಾರು ಯೋಜನೆಗಳು ಅವರಿಗೆ ವರವಾಗಿ ಪರಿಣಮಿಸಲಿವೆ. ಆದುದರಿಂದ ಅವರು ಬಸವನಬಾಗೇವಾಡಿ ಕ್ಷೇತ್ರದಿಂದ ಸ್ಪರ್ಧಿಸಿದರೆ ನಮ್ಮ ಪಕ್ಷದ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಅವರನ್ನು ಗೆಲ್ಲಿಸಲು ತಯಾರಿದ್ದಾರೆ ಎಂದು ತಿಳಿಸಿದರು.