ರಿಕ್ಷಾಕ್ಕೆ ಕಾರು ಢಿಕ್ಕಿ: ಚಾಲಕ ಸಾವು
Update: 2017-09-18 21:34 IST
ಕಾರ್ಕಳ, ಸೆ.18: ನೀರೆ ಗ್ರಾಮದ ಜಡ್ಡು ಎಂಬಲ್ಲಿ ಸೆ.17ರಂದು ಸಂಜೆ 4:30ರ ಸುಮಾರಿಗೆ ಕಾರೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟು, ನಾಲ್ವರು ಪ್ರಯಾಣಿಕರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಮೃತರನ್ನು ರಿಕ್ಷಾ ಚಾಲಕ ರಮೇಶ್ ಕುಲಾಲ್ ಎಂದು ಗುರುತಿಸಲಾಗಿದೆ. ರಿಕ್ಷಾದಲ್ಲಿದ್ದ ಕುಂದಾಪುರ ತಲ್ಲೂರು ಗುಡ್ಡೆಯಂಗಡಿಯ ನೀಲಕಂಠ, ಅರುಂಧತಿ, ಮಾನಸ, ವಿಶ್ವನಾಥ ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು, ಉಡುಪಿ ಕಡೆ ಯಿಂದ ಧರ್ಮಸ್ಥಳದ ಕಡೆ ಹೋಗುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತು. ಇದರಿಂದ ರಿಕ್ಷಾ ಚಾಲಕ ರಮೇಶ್ ಕುಲಾಲ್ ಸಹಿತ ಪ್ರಯಾಣಿಕರು ಗಾಯಗೊಂಡರು. ಗಂಭೀರ ಸ್ಥಿತಿಯಲ್ಲಿದ್ದ ರಮೇಶ್ ಕುಲಾಲ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.