×
Ad

​ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2017-09-18 21:36 IST

ಕಾರ್ಕಳ, ಸೆ.18: ವೈಯಕ್ತಿಕ ಕಾರಣದಿಂದ ಮನನೊಂದು ಸೆ.3ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ಕಳ ಗಾಂಧಿ ಮೈದಾನದ ಬಳಿಯ ನಿವಾಸಿ ಪ್ರೇಮಾನಂದ ಶೆಣೈ(67) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಸೆ.17ರಂದು ಮದ್ಯಾಹ್ನ  ಮೃತಪಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಲೂರು: ಕೊಲ್ಲೂರು ಸುಬ್ಬರಸನ ತೊಪ್ಲು ನಿವಾಸಿ ಜಯರಾಮ ಶೆಟ್ಟಿ ಎಂಬವರ ಮಗ ಕಿಶನ್ (28) ಎಂಬವರು ಸೆ.17ರಂದು ರಾತ್ರಿ ತಾವು ವಾಸವಾಗಿರುವ ಬಾಡಿಗೆ ಮನೆಯಲ್ಲಿ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News