×
Ad

ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ ಕಾರ್ಯಾಗಾರ

Update: 2017-09-18 22:20 IST

ಉಡುಪಿ, ಸೆ.18:ಸಾಲಿಗ್ರಾಮ ಪಟ್ಟಣ ಪಂಚಾಯತ್ ವತಿಯಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ (ಎಸ್‌ಎಲ್‌ಆರ್‌ಎಂ) ಯೋಜನೆಗೆ ಸೆ.20ರಂದು ಅಪರಾಹ್ನ 3 ಗಂಟೆಗೆ ಸಾಲಿಗ್ರಾಮ ಶ್ರೀಗುರುನರಸಿಂಹ ದೇವಳದ ಜ್ಞಾನಮಂದಿರದಲ್ಲಿ ಚಾಲನೆ ನೀಡಲಾಗುವುದು. ಈ ಕಾರ್ಯಾಗಾರದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಕಾರ್ಯಗಾರದಲ್ಲಿ ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಇಂಡಿಯನ್ ಗ್ರೀನ್ ಸರ್ವೀಸ್‌ನ ಯೋಜನಾ ನಿರ್ದೇಶಕ ವೆಲ್ಲೂರು ಶ್ರೀನಿವಾಸನ್ ಭಾಗವಹಿಸಲಿದ್ದು, ತರಬೇತಿ ನೀಡಲಿರುವರು. ಸಾರ್ವಜನಿಕರಿಗೆ ಈ ಕಾರ್ಯಕ್ರಮಕ್ಕೆ ಮುಕ್ತ ಪ್ರವೇಶವಿದ್ದು, ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News