ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸಲಿ : ಸೋನಿಯಾಗಾಂಧಿಗೆ ಸುದರ್ಶನ್ ಮನವಿ
ಕೋಲಾರ, ಸೆ.18: ಬಯಲುಸೀಮೆ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಕಾಂಗ್ರೆಸ್ ಪಕ್ಷದ ಹಿತ ದೃಷ್ಟಿಯಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಸ್ವರ್ಧಿಸಲು ಅನುವು ಮಾಡಿಕೊಡಬೇಕು ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಬಯಲುಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಭಿವೃದ್ಧಿಗೆ ಹಿಂದಿನ ಯಾವುದೇ ಸರಕಾರವೂ ನೀಡದ ಅನುದಾನವನ್ನು ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಈ ಜಿಲ್ಲೆಗಳ ಅಭಿವೃದ್ಧಿ ಹಾಗೂ ಪಕ್ಷದ ಬಲವರ್ಧನೆ ದೃಷ್ಟಿಯಿಂದ ಕೋಲಾರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯೆಂದು ಪಕ್ಷದ ಹಿರಿಯ ಮುಖಂಡರೂ, ಮುಖ್ಯಮಂತ್ರಿಗಳು ಆದ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚಿಸಿ ಅವರು ಕೋಲಾರದಿಂದಲೇ ಸ್ವರ್ಧಿಸಲು ಅನುವು ಮಾಡಿಕೊಡಬೇಕೆಂದು ಎಂದು ಮನವಿ ಮಾಡಿದ್ದಾರೆ.