×
Ad

ಖಮರುಲ್ ಇಸ್ಲಾಂ ನಿಧನ: ಪಾಪ್ಯುಲರ್ ಫ್ರಂಟ್ ಸಂತಾಪ

Update: 2017-09-18 23:34 IST

ಮಂಗಳೂರು, ಸೆ. 18: ಕರ್ನಾಟಕ ರಾಜ್ಯದ ಮಾಜಿ ಸಚಿವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೂ ಆಗಿರುವ ಖಮರುಲ್ ಇಸ್ಲಾಂ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ರಾಜ್ಯಾಧ್ಯಕ್ಷ ಮುಹಮ್ಮದ್ ಶಾಕಿಬ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಆರು ಬಾರಿ ಶಾಸಕರಾಗಿ ಹಾಗೂ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಖಮರುಲ್ ಇಸ್ಲಾಂ ಪೌರಾಡಳಿತ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ದುರ್ಬಲ ಜನ ವಿಭಾಗದ ಬಗ್ಗೆ ತೀವ್ರ ಕಳಕಳಿಯನ್ನು ಹೊಂದಿದ್ದ ಖಮರುಲ್ ಇಸ್ಲಾಂ ಅತ್ಯಂತ ಜನಪ್ರಿಯ ಜನ ನಾಯಕರಾಗಿದ್ದರು. ಖಮರುಲ್ ಇಸ್ಲಾಂ ಹಠಾತ್ ನಿಧನವು ಸಮಾಜಕ್ಕೆ ದೊಡ್ಡ ನಷ್ಟವಾಗಿದೆ. ಮೃತರ ಕುಟುಂಬದ ದುಃಖದಲ್ಲಿ ನಾವೂ ಭಾಗಿಯಾಗಿರುತ್ತೇವೆ. ಸೃಷ್ಟಿಕರ್ತನು ಮೃತರ ಸತ್ಕರ್ಮಗಳನ್ನು ಸ್ವೀಕರಿಸಲೆಂದು ಈ ಮೂಲಕ ಪ್ರಾರ್ಥಿಸುತ್ತೇವೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News