ರಾಜ್ಯ ಸರಕಾರದಿಂದ ಹಿಂದುಳಿದ ವರ್ಗದವರಿಗೆ ಅನ್ಯಾಯ: ಕೆ.ಪಿ.ನಂಜುಂಡಿ
ಕಡೂರು, ಸೆ.19: ಹಿಂದುಳಿದ ವರ್ಗಗಳ ಮತ ಪಡೆದು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಿಂದುಳಿದ ವರ್ಗದವರಿಗೆ ಅನ್ಯಾಯವೆಸಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಕೆ.ಪಿ.ನಂಜುಂಡಿ ಆರೋಪಿಸಿದ್ದಾರೆ.
ಅವರು ಮಂಗಳವಾರ ಪಟ್ಟಣದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ನಡೆದ 9ನೆ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತ್ಯುತ್ಸವದ ಪೂರ್ವಭಾವಿ ಸಭೆ ಹಾಗೂ ಸನ್ಮಾನ ಸಮಾರಂಭವನ್ನು ಉದ್ಟಾಟಿಸಿ ಮಾತನಾಡಿ ಅವರು, ರಾಜ್ಯದಲ್ಲಿ ಅತೀ ಹಿಂದುಳಿದ ವರ್ಗಕ್ಕೆ ಸೇರಿದ ಮಡಿವಾಳ, ಉಪವೀರ, ಗಂಗೆಮತ ಮುಂತಾದ ಅತೀ ಹಿಂದುಳಿದ ಸಮಾಜಗಳಿಗೆ ಕೈಹಿಡಿದು ಎತ್ತುವ ಯಾವುದೇ ಕಾರ್ಯಗಳನ್ನು ಮಾಡಿಲ್ಲ. ಅದರ ಬದಲು ಇತಂಹ ಸಮಾಜಗಳನ್ನು ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾವು ಅಧಿಕಾರಕ್ಕಾಗಿ ಅಂಟಿಕೊಂಡಿಲ್ಲ. ತಮ್ಮ ಶ್ರಮವೆನ್ನಿದ್ದರೂ ಸಮಾಜದ ಸಂಘಟನೆಗಾಗಿ ದೇಶದಲ್ಲಿ 12 ಕೋಟಿ ಜನಸಂಖ್ಯೆ ಇದ್ದು. ರಾಜ್ಯದಲ್ಲಿ 45 ಲಕ್ಷ ಜನಸಂಖ್ಯೆ ಇದೆ. ಈ ಸಮಾಜದ ನಿಗಮಕ್ಕೆ ಮುಖ್ಯಮಂತ್ರಿಗಳು ನೀಡಿದ ಅನುದಾನ ಕೇವಲ ರೂ. 5 ಕೋಟಿ ಅನುದಾನ ನೀಡುವಲ್ಲೂ ಸಹ ಮಲತಾಯಿ ದೋರಣೆ ಅನುಸರಿಸಿದ್ದಾರೆ ಎಂದು ದೂರಿದರು.
ಈ ವೇಳೆ ಬಿಜೆಪಿ ಮುಖಂಡರಾದ ಬೀರೂರು ದೇವರಾಜು, ರೇಖಾ ಹುಲಿಯಪ್ಪಗೌಡ, ಗಿರೀಶ್ ಉಪ್ಪಾರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಜಿ.ಬಿ. ನಿಂಗಾಚಾರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವಕರ್ಮ ಮಹಾಸಭಾ ಮಹಿಳಾ ರಾಜ್ಯಾಧ್ಯಕ್ಷೆ ಆರ್.ವಿ. ಭಾಗ್ಯ, ಪದ್ಮಾವತಿ, ಗೋಪಾಲಚಾರ್, ಕೆ.ಎಚ್. ಶಂಕರ್ ಮತ್ತಿತರಿದ್ದರು.