ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಅರಿವು
Update: 2017-09-19 23:01 IST
ಉಡುಪಿ, ಸೆ.19: ಉಡುಪಿ ನಗರ ಪೊಲೀಸ್ ಠಾಣೆ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಮಾದಕ ವಸ್ತುಗಳ ದುಷ್ಪ ರಿಣಾಮಗಳ ಅರಿವು ಕಾರ್ಯಕ್ರಮವು ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಉಪವಿಭಾಗದ ಡಿವೈಎಸ್ಪಿ ಕುಮಾರಸ್ವಾಮಿ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಹಾಗೂ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಮಧೂಸೂದನ್ ಭಟ್ ವಹಿಸಿದ್ದರು.
ಉಡುಪಿ ಎಡಿಪಿ ಜ್ಯೋತಿ ಪಿ ನಾಯಕ್, ಮನೋ ವೈದ್ಯ ಡಾ.ಪಿ.ವಿ. ಭಂಡಾರಿ ಮಾದಕದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಉಡುಪಿ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ, ಉಡುಪಿ ನಗರ ಪೊಲೀಸ್ ಉಪನಿರೀಕ್ಷಕ ಅನಂತಪದ್ಮನಾಭ, ಅವಿನಾಶ್ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು.