×
Ad

​ಸೆ.25: ತಲಪಾಡಿಯಲ್ಲಿ ಕಸಾಪ ವಾರ್ಷಿಕ ಅಧಿವೇಶನ

Update: 2017-09-19 23:24 IST

ಮಂಗಳೂರು, ಸೆ.19: ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವಸದಸ್ಯರ 101ನೆ ವಾರ್ಷಿಕ ಅಧಿವೇಶನವು ಅಧ್ಯಕ್ಷ ಡಾ. ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಸೆ.25ರಂದು ಮಧ್ಯಾಹ್ನ 12.15ರಿಂದ ತಲಪಾಡಿಯ ದೇವೀನಗರದಲ್ಲಿರುವ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಹಾಗೂ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಎಲ್ಲ ಜಿಲ್ಲಾಧ್ಯಕ್ಷರು ಹಾಗೂ ಹೊರ ರಾಜ್ಯದ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಾಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಪರಿಷತ್ತಿನ ಸರ್ವ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.

ಕಳೆದ ವರ್ಷ ಬೀದರ್‌ನಲ್ಲಿ ವಾರ್ಷಿಕ ಅಧಿವೇಶನ ನಡೆದಿದ್ದು, ಈ ಬಾರಿ ಮೊದಲ ಬಾರಿಗೆ ಮಂಗಳೂರಿನಲ್ಲಿ ಸಭೆ ಆಯೋಜಿಸಲಾಗಿದೆ. ಅತಿಥೇಯ ನೆಲೆಯಲ್ಲಿ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಿಗೆ, ಹೊರರಾಜ್ಯದ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಾಧ್ಯಕ್ಷರಿಗೆ ಹಾಗೂ ಪರಿಷತ್ತಿನ ಸದಸ್ಯರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಸಭೆಯಲ್ಲಿ ಭಾಗವಹಿಸುವ ಪರಿಷತ್ತಿನ ಸದಸ್ಯರು ಸಭೆಗೆ ಬರುವಾಗ ಗುರುತಿನ ಚೀಟಿಯನ್ನು ತರಲು ವಿನಂತಿಸಲಾಗಿದೆ ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಬಿ.ತಮ್ಮಯ್ಯ, ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ಮೋಹನ್ ರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಹಾಸ್ ರೈ.ಬಿ, ವಾರ್ತಾಧಿಕಾರಿ ಖಾದರ್ ಶಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News