ಬಡವರಿಗೆ ಉಚಿತ ಆ್ಯಂಜಿಯೋಪ್ಲಾಸ್ಟ್

Update: 2017-09-19 18:06 GMT

ಬೆಂಗಳೂರು, ಸೆ.19: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಉಚಿತವಾಗಿ ಆ್ಯಂಜಿಯೋಪ್ಲಾಸ್ಟ್ ಮತ್ತು ಸ್ಟಂಟ್ ಅಳವಡಿಕೆಗೆ ಜಯದೇವ ಮತ್ತು ವಿಕ್ಟೋರಿಯಾ ಆಸ್ಪತ್ರೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಬಿಬಿಎಂಪಿ ಮುಂದಾಗಿದೆ.

ಬಜೆಟ್‌ನಲ್ಲಿ ಘೋಷಿಸಿದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬಡವರಿಗೆ ನೆರವಾಗಲು ಬಿಬಿಎಂಪಿ ನಿರ್ಧರಿಸಿದೆ. ಜಯದೇವ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಉಚಿತವಾಗಿ ಆ್ಯಂಜಿಯೋಪ್ಲಾಸ್ಟ್ ಮತ್ತು ಸ್ಟಂಟ್ ಅಳವಡಿಕೆ ಮಾಡಲಾಗುತ್ತದೆ.

ಯೋಜನೆಗೆ ಸಂಬಂಧಿಸಿದಂತೆ ಬಿಬಿಎಂಪಿ ಬಜೆಟ್‌ನಲ್ಲಿ 4 ಕೋಟಿ ರೂ. ಮೀಸಲಿಡಲಾಗಿದೆ. ಜಯದೇವ ಆಸ್ಪತ್ರೆಗೆ 3.5ಕೋಟಿ ರೂ. ಹಾಗೂ ವಿಕ್ಟೋರಿಯಾ ಆಸ್ಪತ್ರೆಗೆ 50ಲಕ್ಷ ರೂ. ನೀಡಲಾಗುತ್ತದೆ. ಆಸ್ಪತ್ರೆಗಳ ಜತೆಗೆ ಒಪ್ಪಂದ ಮಾಡಿಕೊಂಡ ನಂತರ ಹಣ ವರ್ಗಾಯಿಸಲಾಗುತ್ತದೆ.

ಈ ಕಾರ್ಯಕ್ರಮದ ಅನುಷ್ಠಾನದಿಂದ ಪ್ರತೀ ವಾರ್ಡ್‌ಗೆ ಇಬ್ಬರಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ವರ್ಷಕ್ಕೆ 396 ಹೃದ್ರೋಗಿಗಳಿಗೆ ಯೋಜನೆ ಲಾಭ ಸಿಗಲಿದೆ. ಬಿಬಿಎಂಪಿ ಸದಸ್ಯರು ತಮ್ಮ ವಾರ್ಡ್ ವ್ಯಾಪ್ತಿಯಲ್ಲಿನ ರೋಗಿಗಳನ್ನು ಗುರುತಿಸಿ ಪಟ್ಟಿ ನೀಡಿದವರಿಗೆ ಮಾತ್ರ ಉಚಿತ ಚಿಕಿತ್ಸೆ ಸಿಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News