ರೋಹನ್‌ಗೆ ವಿಟಿಯು ಉತ್ತಮ ದೇಹದಾರ್ಢ್ಯ ಪ್ರಶಸ್ತಿ
Update: 2017-09-20 19:07 IST
ಉಡುಪಿ, ಸೆ.20: ತುಮಕೂರು ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ದಲ್ಲಿ ಇತ್ತೀಚೆಗೆ ನಡೆದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2017-18ನೆ ಸಾಲಿನ ರಾಜ್ಯ ಮಟ್ಟದ 18ನೆ ಅಂತರ್ ಕಾಲೇಜು ಪುರುಷರ 70ಕೆಜಿ ವಿಭಾಗದ ಸಿಂಗಲ್ ರೆನ್ ಉತ್ತಮ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಬಂಟಕಲ್ಲು ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ತೃತೀಯ ವರ್ಷದ ವಿದ್ಯಾರ್ಥಿ ರೋಹನ್ ಸುರೇಶ್ ಶೆಟ್ಟಿ ಪ್ರಥಮ ಬಹುಮಾನ ಮತ್ತು ವಿಟಿಯು ಉತ್ತಮ ದೇಹದಾರ್ಢ್ಯ ಪಟು ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.
65ಕೆಜಿ ವಿಭಾಗದಲ್ಲಿ ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ರಮಿತ್ ಡಿ.ಶೆಟ್ಟಿ ತೃತೀಯ ಬಹುಮಾನವನ್ನು ಪಡೆದಿದ್ದಾರೆ. ಅಲ್ಲದೆ ಸಂಸ್ಥೆಯ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್‌ಶಿಪ್ ಪ್ರಶಸ್ತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.