×
Ad

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ: ಆಳ್ವಾಸ್ ಪ್ರೌಢಶಾಲೆಗೆ ಪ್ರಶಸ್ತಿ

Update: 2017-09-20 20:02 IST

ಮೂಡುಬಿದಿರೆ,ಸೆ.20: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ, ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ವಲಯ ಹಾಗೂ ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಪ್ರೌಢಶಾಲೆಯು 4 ಚಿನ್ನ, 6 ಬೆಳ್ಳಿ, 3 ಕಂಚು ಒಟ್ಟು 13 ಪದಕಗಳೊಂದಿಗೆ 17 ವರ್ಷ ವಯೋಮಿತಿಯ ಬಾಲಕರ ತಂಡ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುತ್ತಾರೆ.

ಮುಂದಿನ ತಿಂಗಳು ನಡೆಯುವ ರಾಜ್ಯಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಳ್ವಾಸ್ ಪ್ರೌಢಶಾಲೆಯಿಂದ ಅಮಿತ್ ಸಿ.ಕೆ., ಯೋಗೇಶ್, ಭುವನ್, ಕಿರಣ್ ಜಿ. ಬಿರಾದಾರ್ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News