ಸೆ.21ರಂದು ರಾಜ್ಯಕ್ಕೆ ಕೇಂದ್ರ ಸಚಿವ ಜಾವ್ಡೇಕರ್ ಪ್ರವಾಸ
Update: 2017-09-20 20:18 IST
ಬೆಂಗಳೂರು, ಸೆ. 21: ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಮೂರು ದಿನಗಳ ಪ್ರವಾಸಕ್ಕಾಗಿ ಸೆ.21ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಬೀದರ್ ಜಿಲ್ಲೆ ಹುಮ್ನಾಬಾದ್‌ಗೆ ಆಗಮಿಸಲಿದ್ದು, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಕಲಬುರಗಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದು, ಸಂಜೆ ಸೆಂಟ್ರಲ್ ವಿವಿ ಸಭೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಲಾಗಿದೆ.
ಸೆ.22ರಂದು ಯಾದಗಿರಿ, ರಾಯಚೂರು ಮತ್ತು ಸೆ.23ರಂದು ಬಳ್ಳಾರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಸಜ್ಜುಗೊಳಿಸಲಿದ್ದಾರೆ ಎಂದು ಬಿಜೆಪಿ ಪ್ರಕಟನೆ ತಿಳಿಸಿದೆ.