×
Ad

​ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಅರ್ಜಿ ಸ್ವೀಕಾರ

Update: 2017-09-20 20:25 IST

ಉಡುಪಿ, ಸೆ.20: ಉಡುಪಿ ತಾಲೂಕಿನ ಪರಿಶಿಷ್ಟ ಪಂಗಡದ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಗೊಂಡಿದೆ.

 ಸಂಬಂಧಿತ ವಿದ್ಯಾರ್ಥಿಗಳು ದಾಖಲೆಗಳೊಂದಿಗೆ ನೇರವಾಗಿ www.scholarships.gov.in  ವಿಳಾಸದಲ್ಲಿ ಸಂಪೂರ್ಣ ಮಾಹಿತಿಯನ್ನು (ಆಧಾರ್ ಕಾರ್ಡ್, ಬ್ಯಾಂಕ್ ಖಾತೆ, ಜಾತಿ ಮತ್ತುಆದಾಯ ಪ್ರಮಾಣ ಪತ್ರ) ನೀಡಿ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸ ಲಾಗಿದೆ. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News