×
Ad

ಡಿಸೆಂಬರ್‌ನೊಳಗೆ ಅನುದಾನ ವ್ಯಯಿಸಿ:ಉಡುಪಿ ಜಿಲ್ಲಾಧಿಕಾರಿ

Update: 2017-09-20 21:01 IST

ಉಡುಪಿ, ಸೆ.20: ಜಿಲ್ಲೆಯ ಎಲ್ಲಾ ಇಲಾಖೆಗಳು ಬಿಡುಗಡೆ ಮಾಡಿರುವ ಎಸ್‌ಟಿಪಿ/ಟಿಎಸ್‌ಪಿ ಕಾರ್ಯಕ್ರಮಗಳ ಅನುದಾನವನ್ನು ಡಿಸೆಂಬರ್ ತಿಂಗಳ ಕೊನೆಯೊಳಗೆ ಸಂಪೂರ್ಣವಾಗಿ ವೆಚ್ಚ ಮಾಡಬೇಕೆಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಎಲ್ಲಾ ಇಲಾಖೆಗಳು ಅ.15ರೊಳಗೆ ಫಲಾನುಭವಿಗಳನ್ನು ಆಯ್ಕೆ ಮಾಡಿ, ಡಿಸೆಂಬರ್ ಅಂತ್ಯದ ವೇಳೆಗೆ ತಮಗೆ ನೀಡಿರುವ ಅನುದಾನವನ್ನು ಸಂಪೂರ್ಣ ವಾಗಿ ವೆಚ್ಚ ಮಾಡಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಿಗೆ ಭೇಟಿ ನೀಡಿ ಅಲ್ಲಿಗೆ ಅವಶ್ಯಕವಾಗಿ ಕೈಗೊಳ್ಳಬೇಕಾದ ಕಾಮಗಾರಿಯ ಪಟ್ಟಿ ಯನ್ನು ಸಂಬಂಧಪಟ್ಟ ಇಲಾಖೆಗಳಿಗೆ ನೀಡಬೇಕು ಎಂದು ಅವರು ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

 ಕಾಮಗಾರಿಗಳನ್ನು ಆಯ್ಕೆ ಮಾಡುವಾಗ ಕುಡಿಯುವ ನೀರು, ವಿದ್ಯುತ್ ಸಂಪರ್ಕ ಹಾಗೂ ವಸತಿ ಸೌಕರ್ಯಗಳಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿ ಕಾರಿ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News