ಬಾಲ್ಯ ವಿವಾಹ ನಿಷೇಧ ಕಾಯ್ದೆ : ಧಾರ್ಮಿಕ ಮುಖ್ಯಸ್ಥರಿಗೆ ತರಬೇತಿ
Update: 2017-09-20 22:32 IST
ಮಂಗಳೂರು, ಸೆ.20: ಬಾಲ್ಯವಿವಾಹ ನಿಷೇಧ ಕಾಯ್ದೆ (ಕರ್ನಾಟಕ ತಿದ್ದುಪಡಿ) ವಿಧೇಯಕ 2016ರ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಕದ್ರಿಯ ಜಿಲ್ಲಾ ಬಾಲಭವನದಲ್ಲಿ ಜಿಲ್ಲೆಯ ರ್ಧಾುಕ ಸಂಸ್ಥೆಗಳಾದ ದೇವಸ್ಥಾನ, ಚರ್ಚ್, ಮಸೀದಿಗಳ ಮುಖ್ಯಸ್ಥರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ತರಬೇತಿಯನ್ನು ಏರ್ಪಡಿಸಲಾಯಿತು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ನಿಕೇಶ್ ಶೆಟ್ಟಿ ತರಬೇತಿಯ ಉದ್ಘಾಟನೆ ನೆರವೇರಿಸಿದರು. ದ.ಕ.ಜಿಲ್ಲೆ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಾಧೀಶ ಮಲ್ಲನ ಗೌಡ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸುಂದರ ಪೂಜಾರಿ ತರಬೇತಿಯ ಉಪಯುಕ್ತತೆಯ ಬಗ್ಗೆ ಮಾತನಾಡಿದರು.