ಶಾಲಾ ಶೌಚಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

Update: 2017-09-21 13:55 GMT

ಹರ್ಯಾಣ, ಸೆ.21: ಶೌಚಾಲಯದಲ್ಲಿ 9ನೆ ತರಗತಿಯ ವಿದ್ಯಾರ್ಥಿನಿಗೆ ಶಾಲಾ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಹರ್ಯಾಣದ ಪಾನಿಪತ್ ನಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಐವರನ್ನು ವಿಚಾರಣೆಗೊಳಪಡಿಸಿದ್ದಾರೆ. ಶೌಚಾಲಯ ಸಮೀಪ ಸಿಸಿ ಕ್ಯಾಮರಾಗಳಿವೆಯೇ ಎಂದು ಕೂಡ ಪೊಲೀಸರು ಪರಿಶೀಲಿಸಿದ್ದು, ಆ ಪ್ರದೇಶದಲ್ಲಿ ಯಾವುದೇ ಸಿಸಿ ಕ್ಯಾಮರಾ ಕಂಡುಬಂದಿಲ್ಲ.

ಈ ಘಟನೆಯ ನಂತರ ಆಕ್ರೋಶಗೊಂಡ ಪೋಷಕರು ಶಾಲೆಯ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶೌಚಾಲಯದಿಂದ ಅಳುತ್ತಾ ಹೊರಬಂದ ವಿದ್ಯಾರ್ಥಿನಿ ಘಟನೆಯ ಬಗ್ಗೆ ಶಿಕ್ಷಕರಲ್ಲಿ ತಿಳಿಸಿದ್ದಾಳೆ. ಆದರೆ ಶಾಲೆಯ ಆಡಳಿತ ಯಾವುದೇ ಕ್ರ,ಮ ಕೈಗೊಂಡಿಲ್ಲ ಎನ್ನಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News