ರಾಜ್ಯದಲ್ಲಿ ಬಿಜೆಪಿ 150 ಸ್ಥಾನ ಗೆಲ್ಲಲಿದೆ: ಕೇಂದ್ರ ಸಚಿವ ಜಾವಡೇಕರ್

Update: 2017-09-21 14:20 GMT

ಕಲಬುರಗಿ, ಸೆ.21: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಭವಿಷ್ಯ ನುಡಿದಿದ್ದಾರೆ.

ಗುರುವಾರ ನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸರಕಾರ ಬರುವುದು ಖಚಿತ. ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ ಎಂದರು.

ರಾಜ್ಯದ ಜನರು ಕಾಂಗ್ರೆಸ್ ಸರಕಾರದ ವಿರುದ್ಧವಿದ್ದಾರೆ. ರಾಜ್ಯದ ಜನತೆಯು ಭ್ರಷ್ಟಾಚಾರ ರಹಿತ ಅಭಿವೃದ್ಧಿಯನ್ನು ಬಯಸಿದ್ದಾರೆ. ಪ್ರಧಾನಿ ನರೇಂದ್ರಮೋದಿ ದೇಶದಲ್ಲಿ ಭ್ರಷ್ಟಾಚಾರ ರಹಿತ ಅಭಿವೃದ್ಧಿಯನ್ನು ಮಾಡುತ್ತಿದ್ದಾರೆ ಎಂದು ಪ್ರಕಾಶ್ ಜಾವಡೇಕರ್ ಹೇಳಿದರು.

ಅಹಿಂದ ಹೆಸರು ಹೇಳಿಕೊಂಡು ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರಕ್ಕೆ ಬಂತು. ಆದರೆ, ಅಧಿಕಾರಕ್ಕೆ ಬಂದ ನಂತರ ಈ ವರ್ಗಗಳ ಕಲ್ಯಾಣಕ್ಕೆ ಯಾವುದೇ ಸಹಾಯವನ್ನು ಮಾಡಿಲ್ಲ. ಅದರ ಬದಲಾಗಿ, ಜಾತಿ, ಧರ್ಮಗಳ ನಡುವೆ ಜಗಳ ಹಚ್ಚುತ್ತಿದೆ. ಹೀಗಾಗಿ, ಮುಖ್ಯಮಂತ್ರಿಯ ವಿರುದ್ಧ ರಾಜ್ಯದ ಜನರು ಆಕ್ರೋಶಗೊಂಡಿದ್ದಾರೆ ಎಂದು ಪ್ರಕಾಶ್ ಜಾವಡೇಕರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News