ಅಣ್ಣ ತಮ್ಮಂದಿರ ಜಗಳ ಅಣ್ಣನ ಕೊಲೆಯಲ್ಲಿ ಅಂತ್ಯ
ಬೆಂಗಳೂರು, ಸೆ.21: ಕ್ಷುಲ್ಲಕ ಕಾರಣಕ್ಕೆ ಸಹೋದರರ ನಡುವೆ ನಡೆದ ಜಗಳ ಅಣ್ಣನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಬಾಣಸವಾಡಿಯ ಆಸ್ಕರ್ ರೊಜಾರಿಯೊ(49) ಕೊಲೆಯಾದ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದಾರೆ.
ಘಟನೆ ವಿವರ: ಪೇಂಟರ್ ವೃತ್ತಿ ಮಾಡುತ್ತಿದ್ದ ತಮ್ಮ ರೋಸ್ಟನ್ ರೊಝಾರಿಯೊ ತಾಯಿಯ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬುಧವಾರ ರಾತ್ರಿ 10 ಗಂಟೆಗೆ ಮನೆಗೆ ಬಂದಾಗ ಆಸ್ಕರ್ ಮನೆಗೆ ಬೀಗ ಹಾಕಿಕೊಂಡು ಹೊರಗೆ ಹೋಗಿದ್ದ. ಮೊಬೈಲ್‌ಗೆ ಕರೆ ಮಾಡಿದ್ದರೂ ಮೊಬೈಲ್ ಸ್ವೀಕರಿಸಿರಲಿಲ್ಲ ಎನ್ನಲಾಗಿದೆ.
ಇದರಿಂದ ಕೋಪಗೊಂಡಿದ್ದ ರೋಸ್ಟನ್ ಕೆಲ ಸಮಯದ ಬಳಿಕ ಮನೆಗೆ ಬಂದ ಅಣ್ಣನ ಜೊತೆ ಮನೆಗೆ ಬೀಗ ಹಾಕಿಕೊಂಡು ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡಿ ಚಾಕುನಿಂದ ಅಣ್ಣನಿಗೆ ಇರಿದಿದ್ದಾನೆ. ಗಂಭೀರ ಗಾಯಗೊಂಡ ಆಸ್ಕರ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ವುೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಪ್ರಕರಣ ಸಂಬಂಧ ಬಾಣಸವಾಡಿ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.