×
Ad

ಲಾರಿಗೆ ಕ್ಯಾಬ್ ಢಿಕ್ಕಿ: ಚಾಲಕ ಮೃತ್ಯು

Update: 2017-09-21 20:42 IST

ಬೆಂಗಳೂರು, ಸೆ.21: ರಸ್ತೆ ಬಳಿ ಇದ್ದ ಲಾರಿಗೆ ಕ್ಯಾಬ್ ಢಿಕ್ಕಿ ಹೊಡೆದ ಪರಿಣಾಮ ಕ್ಯಾಬ್ ಚಾಲಕ ಸಾವನ್ನಪ್ಪಿರುವ ಘಟನೆ ಇಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ತಮಿಳುನಾಡಿನ ಪಶುಪತಿ (24) ಮೃತಪಟ್ಟ ಕ್ಯಾಬ್ ಚಾಲಕ ಎಂದು ಪೊಲೀಸರು ಗುರುತಿಸಿದ್ದಾರೆ.

ನಗರದ ಬೊಮ್ಮನಹಳ್ಳಿಯಲ್ಲಿ ವಾಸವಾಗಿದ್ದ ಪಶುಪತಿ ಬುಧವಾರ ಬೆಳಗಿನ ಜಾವ ಹೊಸೂರು ರಸ್ತೆ ಮೇಲ್ಸೇತುವೆ ಮೇಲೆ ಕ್ಯಾಬ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಈತನ ಗಮನಕ್ಕೆ ಬಾರದೆ ಅತಿ ವೇಗವಾಗಿ ಬಂದು ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭಸಿವಿದೆ ಎನ್ನಲಾಗಿದೆ.

ಇಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಶವವನ್ನು ಸೈಂಟ್‌ ಜಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News