ಮಡಿಕೇರಿ: ಸರಣಿ ಮಾಧ್ಯಮ ಸಂವಾದ ಕಾರ್ಯಕ್ರಮ

Update: 2017-09-22 11:21 GMT

ಮಡಿಕೇರಿ, ಸೆ.22: ಪತ್ರಿಕೆಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಆಪ್ತ ಸಲಹೆಗಾರರಾಗಬಹುದೇ ಹೊರತು ಚಿಕಿತ್ಸೆ ನೀಡುವ ವೈದ್ಯರಾಗಲು ಸಾಧ್ಯವಿಲ್ಲ ಎಂದು ಶಕ್ತಿ ಸಂಪಾದಕ ಜಿ. ಚಿದ್ವಿಲಾಸ್ ಅಭಿಪ್ರಾಯಪಟ್ಟಿದ್ದಾರೆ. 

ನಗರದ ಎಫ್‍ಎಂಸಿ ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ಕೊಡಗು ಪ್ರೆಸ್‍ ಕ್ಲಬ್ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಪತ್ರಿಕೋದ್ಯಮ ವಿಭಾಗ ಸಂಯುಕ್ತಾಶ್ರಯದಲ್ಲಿ  ನಡೆದ ಸರಣಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಶುಕ್ರವಾರ ಸ್ಥಳೀಯ ಪತ್ರಿಕೆಗಳ ಪ್ರಾಮುಖ್ಯತೆ ಮತ್ತು ಸವಾಲುಗಳು ವಿಷಯ ಕುರಿತ ಮಾತನಾಡಿದ ಅವರು, ಉತ್ತಮ ಸಮಾಜ ನಿರ್ಮಾಣಕ್ಕೆ ಮಾಧ್ಯಮಗಳು ಪೂರಕ ಸಲಹೆ ನೀಡಬಹುದು. ಅದನ್ನು ಸ್ವೀಕರಿಸುವುದು ಅಥವಾ ಬಿಡುವುದು ಸಮಾಜಕ್ಕೆ ಬಿಟ್ಟ ವಿಷಯ. ಪರಿಪೂರ್ಣತೆಯಿಂದ ಕೆಲಸ ಮಾಡಿದ್ದಲ್ಲಿ ಫಲ ಸಿಗುತ್ತದೆ. ನಿಷ್ಠೆಯಿಂದ ಮಾಡುವ ಕೆಲಸಕ್ಕೆ ಮನ್ನಣೆ ದೊರೆಯುತ್ತದೆ. ತಮ್ಮ ಬರಹಕ್ಕೆ ಸ್ಪಂದನೆ ಸಿಗುವಾಗ, ಪರಿಣಾಮ ಬೀರುವಾಗ ತೃಪ್ತಿಯಾಗುತ್ತದೆ ಎಂದು ಹೇಳಿದರು.

ಪತ್ರಿಕೋದ್ಯಮ ವಿದ್ಯಾರ್ಥಿಗಳು ಸುದ್ದಿ, ಲೇಖನ ಬರೆಯವುದನ್ನು ರೂಢಿಸಿಕೊಳ್ಳಬೇಕು. ಮನಸ್ಸು ಮಾಡಿದ್ದಲ್ಲಿ ಪ್ರತಿಯೊಂದು ವಿಷಯದ ಕುರಿತು ಬರೆಯಬಹುದಾಗಿದೆ. ಆದರೆ, ನಮ್ಮಲ್ಲಿ ಬರೆಯುವ ಆಸಕ್ತಿ ಇರಬೇಕೆಂದರು.

ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಬಿ. ಮಂಜುನಾಥ್, ಜಂಟಿ ಕಾರ್ಯದರ್ಶಿ ವಿಘ್ನೇಶ್ ಭೂತನಕಾಡು, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಇಳೆಯರಾಜ, ಮೋನಿಕಾ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News