ಜಿಲ್ಲೆಯ ಬ್ಯಾಂಕ್‌ಗಳಲ್ಲಿ 20,982 ಕೋಟಿ ರೂ. ಠೇವಣಿ ಸಂಗ್ರಹ
ಉಡುಪಿ, ಸೆ.22: ಉಡುಪಿ ಜಿಲ್ಲೆಯ ಎಲ್ಲ ಬ್ಯಾಂಕ್‌ಗಳಲ್ಲಿ ಎರಡನೇ ತ್ರೈಮಾಸಿಕ ಅಂತ್ಯದಲ್ಲಿ ಒಟ್ಟು 20,982 ಕೋಟಿ ರೂ ಠೇವಣಿ ಸಂಗ್ರಹವಿದ್ದು, 10517 ಕೋಟಿ ರೂ. ಮುಂಗಡ ನೀಡಲಾಗಿದೆ ಎಂದು ಎಂದು ಸಿಂಡಿಕೇಟ್ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಉಪ ಮಹಾಪ್ರಬಂಧಕ ಎಸ್.ಎಸ್. ಹೆಗ್ಡೆ ತಿಳಿಸಿದ್ದಾರೆ.
ಮಣಿಪಾಲದಲ್ಲಿರುವ ಉಡುಪಿ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಉಡುಪಿ ಜಿಲ್ಲೆಯ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.
ಎರಡನೆ ತ್ರೈಮಾಸಿಕ ಅಂತ್ಯದಲ್ಲಿ ಜಿಲ್ಲೆಯ ಬ್ಯಾಂಕ್‌ಗಳು ಠೇವಣಿ ಸಂಗ್ರಹ ದಲ್ಲಿ ಶೇ.13.95ರಷ್ಟು ಪ್ರಗತಿ ಸಾಧಿಸಿದ್ದು, ಮುಂಗಡದಲ್ಲಿ ಶೇ.13.87 ಪ್ರಗತಿ ಸಾಧಿಸಲಾಗಿದೆ. ಕೃಷಿ ಕ್ಷೇತ್ರಕ್ಕೆ 654.41 ಕೋಟಿ ಸಾಲ ನೀಡಿ ಶೇ.24.48 ಮತ್ತು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 422.08 ಕೋಟಿ ರೂ., ಶೈಕ್ಷಣಿಕ ಕ್ಷೇತ್ರ ದಲ್ಲಿ 924 ವಿದ್ಯಾರ್ಥಿಗಳಿಗೆ 15.44 ಕೋಟಿ, ವಸತಿ ಕ್ಷೇತ್ರಕ್ಕೆ 109.26 ಕೋಟಿ ಸಾಲ ವಿತರಿಸಲಾಗಿದೆ. ಆದ್ಯತಾ ವಲಯಕ್ಕೆ 1366.05 ಕೋಟಿ ರೂ. ಹಾಗೂ ಆದ್ಯತೇತರ ವಲಯಕ್ಕೆ 430.91ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದರು.
ಜಿಲ್ಲಾ ಲೀಡ್ ಬ್ಯಾಂಕ್ ಮೆನೇಜರ್ ಫ್ರಾನ್ಸಿಸ್ ಬೋರ್ಗಿಯಾ ಮಾತನಾಡಿ, ಪ್ರಧಾನ ಮಂತ್ರಿ ಉದ್ಯೋಗ ಸೃಜನಾ ಯೋಜನೆಯಲ್ಲಿ ಈವರೆಗೆ ಜಿಲ್ಲೆಗೆ ನೀಡಲಾದ ಸಂಪೂರ್ಣ ಗುರಿಯನ್ನು ಸಾಧಿಸಲಾಗಿದ್ದು, ಈ ಮೂಲಕ ಜಿಲ್ಲೆ ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 1940 ಮಂದಿಗೆ 21.56 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದು ತಿಳಿಸಿದರು.
ಅಂಗನವಾಡಿಯ ಬಾಲ ವಿಕಾಸ ಯೋಜನೆಯಡಿ ಆರಂಭಿಸುವ ಬ್ಯಾಂಕ್ ಖಾತೆಗಳಿಗೆ ಶೂನ್ಯ ಬ್ಯಾಲೆನ್ಸ್‌ನಲ್ಲಿ ಖಾತೆ ತೆರೆಯಲು ಅವಕಾಶ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಉಪನಿರ್ದೇಶಕ ಗ್ರೇಸಿ ಗೋನ್ಸಾಲಿಸ್ ಸಭೆಯಲ್ಲಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಉಡುಪಿ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಪಾಶಿ, ಎಲ್ಲಾ ಬ್ಯಾಂಕ್‌ಗಳು ಶೂನ್ಯ ಬ್ಯಾಲೆನ್ಸ್ ಠೇವಣಿಯಲ್ಲಿ ಖಾತೆ ತೆರೆಯಬೇಕು ಎಂದು ಸೂಚಿಸಿದರು.
ಉದ್ಯೋಗಿನಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸಾಲ ನೀಡುವ ಕುರಿತು, ಬ್ಯಾಂಕ್‌ಗಳಿಂದ ತಿರಸ್ಕೃತಗೊಳಿಸಿರುವ ಅರ್ಜಿದಾರರ ಬಳಿಗೆ, ಬ್ಯಾಂಕ್ ಅಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾ ಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ನಬಾರ್ಡ್‌ನ ಸಹಾಯಕ ಮಹಾಪ್ರಬಂಧಕ ಎಸ್.ರಮೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಬ್ಯಾಂಕ್‌ಗಳ ಪ್ರತಿನಿಧಿ ಗಳು ಉಪಸ್ಥಿತರಿದ್ದರು.