ಸೆ.23ರಂದು 'ಮನೆ-ಮನೆಗೆ ಕಾಂಗ್ರೆಸ್' ಕಾರ್ಯಕ್ರಮಕ್ಕೆ ಚಾಲನೆ

Update: 2017-09-22 16:32 GMT

ಬೆಂಗಳೂರು, ಸೆ.22: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಸಾಧನೆಯನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವ ‘ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮಕ್ಕೆ ಸೆ.23ರಂದು ಬೆಳಗ್ಗೆ 10.30ಕ್ಕೆ ಮಹದೇವಪುರ ವಿಧಾನಸಭಾ ಕ್ಷೇತ್ರದ ಹಗದೂರು ವಾರ್ಡ್‌ನಲ್ಲಿ ಚಾಲನೆ ನೀಡಲಾಗುತ್ತಿದೆ.

2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಭರವಸೆ ಈಡೇರಿಸಿ ಅನುಷ್ಠಾನಗೊಂಡಿರುವ ಕಾರ್ಯಕ್ರಮಗಳನ್ನು 224 ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಅಡಿಯಲ್ಲಿ 1.10 ಕೋಟಿ ಕಿರುವತ್ತಿಗೆಗಳನ್ನು ಬೂತ್ ಸಮಿತಿ ಮೂಲಕ ತಲುಪಿಸುವ ಕಾರ್ಯಕ್ರಮ ಇದಾಗಿದೆ.

ಮನೆ-ಮನೆಗೆ ಹೋಗಿ ಕಾಂಗ್ರೆಸ್ ಪಕ್ಷದ ಸಾಧನೆಯ ಪುಸ್ತಕವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್‌ಗುಂಡೂ ರಾವ್, ಎಸ್.ಆರ್.ಪಾಟೀಲ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿತರಣೆ ಮಾಡಲಿದ್ದಾರೆ.

ಆನಂತರ ಮಾರತ್ತಹಳ್ಳಿಯ ರಾಮಗೊಂಡನಹಳ್ಳಿಯ ಆಟದ ಮೈದಾನದಲ್ಲಿ ಕಾರ್ಯಕರ್ತರ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಮಾವೇಶದ ಸ್ಥಳಕ್ಕೆ ಹೋಗಿ ಇಂದು ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News