ಪ್ರವಾಸಿಗರ ಅನುಕೂಲಕ್ಕಾಗಿ ಸಿಂಗಲ್ ಟಿಕೆಟ್ ವ್ಯವಸ್ಥೆ: ಜಿಲ್ಲಾಧಿಕಾರಿ ರಂದೀಪ್

Update: 2017-09-22 17:37 GMT

ಮೈಸೂರು, ಸೆ.22: ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಜಿಲ್ಲಾಡಳಿತ ಮೊದಲಿಗೆ ಸಿಂಗಲ್ ಟಿಕೆಟ್ ವ್ಯವಸ್ಥೆ ಅನುಷ್ಠಾನ ಮಾಡುತ್ತಿದ್ದು, ಸೆಪ್ಟೆಂಬರ್ 22 ರಿಂದ ಸೆಪ್ಟೆಂಬರ್ 30 ರವರೆಗೆ ಪ್ರವಾಸಿಗರು ಅವಕಾಶ ಬಳಸಿಕೊಳ್ಳಬಹು ಎಂದು ಜಿಲ್ಲಾಧಿಕಾರಿ ರಂದೀಪ್ ತಿಳಿಸಿದ್ದಾರೆ.

ದಸರಾ ವಿಶೇಷಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಡಿ. ರಂದೀಪ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಟಿಕೆಟ್ ವ್ಯವಸ್ಥೆ ಅನುಷ್ಠಾನಗೊಳಿಸಿ ಬಳಿಕ ಮಾತನಾಡಿದ ಅವರು, ಈ ವ್ಯವಸ್ಥೆ ಆಧುನಿಕ ಕ್ಯೂ ಆರ್ ಕೋಡ್ ಇರುತ್ತದೆ. ಈ ಬಗ್ಗೆ ದಸರಾ ಉನ್ನತ ಮಟ್ಟದ ಸಮಿತಿಯಲ್ಲಿ ಚರ್ಚೆ ಆಗಿತ್ತು ಅದರಂತೆ ಸಿಂಗಲ್ ಟಿಕೇಟ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಪ್ರವಾಸಿಗರಿಗೆ ಸರತಿ ಸಾಲಿನಲ್ಲಿ ನಿಲ್ಲುವ ಕಿರಿಕಿರಿ ಇರುವುದಿಲ್ಲ ಎಂದು ತಿಳಿಸಿದರು.

ಇಂದಿನಿಂದಲೇ ಜಿಲ್ಲಾಧಿಕಾರಿಗಳ ಕಚೇರಿಯ ಸ್ಪಂದನ ಕೇಂದ್ರದಲ್ಲಿ ಆನ್ ಲೈನ್ ಮೂಲಕ ಪಡೆಯಬಹುದಾಗಿದೆ. ಮೈಸೂರು ಅರಮನೆ, ಮೃಗಾಲಯ, ಕಾರಂಜಿಕೆರೆ, ಚಾಮುಂಡೇಶ್ವರಿ ದೇವಾಲಯ, ಕೆಆರ್ ಎಸ್ ಹಾಗೂ ರಂಗನತಿಟ್ಟು ಪ್ರವಾಸಿ ತಾಣಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಅಲ್ಲದೆ, ಪ್ರವಾಸಿಗರು ಬುಕ್ ಮೈ ಶೋ ವೆಬ್‍ನ ಮೂಲಕ ಆನ್‍ಲೈನ್‍ನಲ್ಲಿ ಪಡೆಯಬಹುದು. ಪ್ರವಾಸಿಗರು ಟಿಕೇಟ್ ಖರೀದಿ ಮಾಡಿದ 15 ದಿನಗಳವರೆಗೆ ಯಾವಾಗಬೇಕಾದರು ಭೇಟಿ ನೀಡಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯ ಇಲಾಖೆ ಉಪನಿರ್ದೇಶಕ ಜನಾರ್ಧನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News