ಸೆ.25: ಕರಾವಳಿ ಟೈಮ್ಸ್ ವಾರ್ಷಿಕೋತ್ಸವ, ಸದಸ್ಯತ್ವ ಅಭಿಯಾನ

Update: 2017-09-23 07:06 GMT

ಬಂಟ್ವಾಳ, ಸೆ. 23: ಕರಾವಳಿ ಟೈಮ್ಸ್ ಕನ್ನಡ ಪಾಕ್ಷಿಕ ಪತ್ರಿಕೆಯ ದ್ವಿತೀಯ ವಾರ್ಷಿಕ ಹಾಗೂ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಸೆ 25 ರಂದು ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದು, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ ಅಧ್ಯಕ್ಷತೆ ವಹಿಸುವರು. ಸಂಸದ ನಳಿನ್ ಕುಮಾರ್ ಕಟೀಲ್ ವಿಶೇಷಾಂಕ ಬಿಡುಗಡೆಗೊಳಿಸುವರು.

ಸಚಿವ ಯು.ಟಿ. ಖಾದರ್, ಶಾಸಕರುಗಳಾದ ಬಿ.ಎ. ಮೊಯ್ದಿನ್ ಬಾವಾ, ಐವನ್ ಡಿಸೋಜಾ, ಬಂಟ್ವಾಳ ಪುರಸಭಾಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಬುಡಾ ಅಧ್ಯಕ್ಷ ಸದಾಶಿವ ಬಂಗೇರಾ, ರಾಜ್ಯ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್, ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಪುರಸಭಾ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಜಿ.ಪಂ. ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮುಹಮ್ಮದ್, ಮಂಜುಳಾ ಮಾವೆ, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಪುತ್ತೂರು ಆರ್ ಟಿ ಒ ಫೆಲಿಕ್ಸ್ ಡಿಸೋಜ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪತ್ರಿಕೆಯ ಪ್ರಧಾನ ಸಂಪಾದಕ ಪಿ‌.ಎಂ. ಅಶ್ರಫ್ ಪಾಣೆಮಂಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News