×
Ad

ಎಲ್ಲಾ ಕ್ಷೇತ್ರಗಳಲ್ಲಿ ಸಮಾನತೆ ಸಿಗಬೇಕೆಂಬುದು ರಾಜ್ಯ ಸರಕಾರದ ಆಶಯ: ಸಚಿವ ಆಂಜನೇಯ

Update: 2017-09-23 17:44 IST

ದಾವಣಗೆರೆ, ಸೆ.23: ಜಿಲ್ಲೆಯ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರ 50ನೆ ಹುಟ್ಟು ಹಬ್ಬಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಮೊರಾರ್ಜಿ ದೇಸಾಯಿ ಪದವಿ ಪೂರ್ವವಸತಿ ಕಾಲೇಜನ್ನು ಲೋಕಾರ್ಪಣೆಗೊಳಿಸಿ ಉಡುಗರೆಯಾಗಿ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ಹೇಳಿದ್ದಾರೆ,

ಆವರಗೊಳ್ಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮೊರಾರ್ಜಿ ದೇಸಾಯಿ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜಿನ ನೂತನ ಕಟ್ಟಡದ ಸಂರ್ಕೀಣ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಅವರು, ಎಲ್ಲಾ ಜನ ವರ್ಗಗಳ ಬಡ ಮಕ್ಕಳಿಗೆ ಶಿಕ್ಷಣ ದೊರೆಯಬೇಕೆಂಬುದು ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿಯವರ ಕನಸಾಗಿತ್ತು. ಅವರ ಕನಸನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ ಎಂದು ತಿಳಿಸಿದರು.

ಯಾವ ಜಾತಿ-ಮತ ಭೇದವಿಲ್ಲದೆ ಎಲ್ಲಾ ವರ್ಗಗಳ ಮಕ್ಕಳಿಗಾಗಿ ಖಾಸಗಿ ಶಾಲೆಗಳ ಸಮಾನಾದ ಸೌಲಭ್ಯಗಳೊಂದಿಗೆ ಶಿಕ್ಷಣ ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಹೊಸ ಮನ್ವಂತರವೇ ಶುರುವಾಗಿದೆ. ಅದರ ದಂಡನಾಯಕ ಸಿದ್ದರಾಮಯ್ಯ. ವಿದ್ಯೆ ಯಾರೊಬ್ಬರ ಸ್ವತ್ತು ಅಲ್ಲ. ಹಾಗಾಗಿ, ಎಲ್ಲರಿಗೂ ಶಿಕ್ಷಣ ಸಿಗಬೇಕು. ಎಲ್ಲಾ ಕ್ಷೇತ್ರಗಳಲ್ಲಿ ಸಮಾನತೆ ಸಿಗಬೇಕೆಂಬುದು ಕಾಂಗ್ರೆಸ್ ಸರ್ಕಾರದ ಆಶಯ ಎಂದರು. 

ದಾವಣಗೆರೆ ಜಿಲ್ಲೆ ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ನಂಬರ್ ಒನ್ ಸ್ಥಾನದಲ್ಲಿದೆ. ವಿಶಾಲವಾದ ಅಚ್ಚುಕಟ್ಟಾದ ಧೂಳು ಮುಕ್ತ ರಸ್ತೆಗಳಾಗಿವೆ. ಬಹುಶಃ ಬೆಂಗಳೂರು ನಗರದಲ್ಲಿಯೂ ಇಂತಹ ರಸ್ತೆಗಳು ಇಲ್ಲ. ಚಿತ್ರದುರ್ಗ, ದಾವಣಗೆರೆ ಎರಡು ಜಿಲ್ಲೆಗಳು ನನ್ನ ಎರಡು ಕಣ್ಣುಗಳಿದ್ದಂತೆ. ಹಾಗಾಗಿ, ಯಾವುದೇ ಅನುದಾನವನ್ನು ಇಲ್ಲಾವೆಂದಿಲ್ಲ ಎಂದು ವಿವರಿಸಿದರು.

ಸಚಿವ ಮಲ್ಲಿಕಾರ್ಜುನ ಮಾತನಾಡಿ, ನನ್ನ ಹುಟ್ಟುಹಬ್ಬಕೆ ತಾವು ನೀಡಿದ ಈ ಸತ್ಕಾರ ನ್ನ ಹೃದಯ ತುಂಬಿ ಬಂದಿದೆ. ಅಂತೆಯೇ ದಾವಣಗೆರೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯುತ್ತಿವೆ. ಶಿಕ್ಷಣ ಕಾಶಿ ಎಂಬ ಹೆಸರು ಸಾರ್ಥಕವಾಗಿದೆ ಎಂದು ಹೇಳಿದರು.

ಆಂಜನೇಯ 26 ಸಾವಿರ ಕೋಟಿಯ ಒಡೆಯ, ಅವನು ಹುಟ್ಟಿ ಬೆಳೆದು ಓಡಾಡಿರುವುದು ಈ ಜಿಲ್ಲೆ. ಹಾಗಾಗಿ ಚಿತ್ರದುರ್ಗದಲ್ಲಿದ್ದರೂ ಈ ಜಿಲ್ಲೆಗೆ ಹೆಚ್ಚು ಅನುದಾನ ನೀಡಬೇಕು. ಜಿಲ್ಲೆಗೆ 1 ಬಿಸಿಎಂ ಹಾಸ್ಟೆಲ್, 1 ಪೋಸ್ಟ್ ಮೆಟ್ರಿಕ್ ಹಾಸ್ಟೆಲ್, ಹರಿಹರಕ್ಕೊಂದು ಬಿಸಿಎಂ ಹಾಸ್ಟೆಲ್ ಮಂಜೂರು ಮಾಡಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವರು, ಈಗಲೇ ಮಂಜೂರು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಜಗಳೂರು ಕ್ಷೇತ್ರದ ಶಾಸಕ ಎಚ್.ಪಿ. ರಾಜೇಶ್, ತಾಪಂ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಜಿಪಂ ಸದಸ್ಯೆ ರೇಣುಕಾ ಕರಿಬಸಪ್ಪ, ಗ್ರಾಪಂ ಅಧ್ಯಕ್ಷ ಅನುಸೂಯಮ್ಮ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ವಸತಿ ಶಿಕ್ಷಣ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ದೊಡ್ಡಯ್ಯ, ಸಣ್ಣ ಚಿತ್ತಯ್ಯ, ತಹಶೀಲ್ದಾರ್‍ರಾದ ಸಂತೋಷ ಕುಮಾರ್, ಶಾಂತರಾಜು ಮತ್ತಿತರರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News