ಹೊನ್ನಾವರ: ಟ್ಯಾಂಕರ್ ಪಲ್ಟಿ; ಅನಿಲ ಸೋರಿಕೆ
Update: 2017-09-24 17:19 IST
ಹೊನ್ನಾವರ, ಸೆ.24: ಅನಿಲ ತುಂಬಿದ ಟ್ಯಾಂಕರೊಂದು ಪಲ್ಟಿಯಾದ ಪರಿಣಾಮ ಅನಿಲ ಸೋರಿಕೆಯಾದ ಘಟನೆ ಪಟ್ಟಣದ ಬೆಂಗಳೂರು ಸರ್ಕಲ್ ಬಳಿ ರವಿವಾರ ಬೆಳಗ್ಗೆ ನಡೆದಿದೆ.
ಬೆಂಗಳೂರು ಸರ್ಕಲ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಟ್ಯಾಂಕರ್‍ನಲ್ಲಿ ಸಣ್ಣ ಪ್ರಮಾಣದ ರಂದ್ರ ವುಂಟಾಗಿ ಅನಿಲ ಸೋರಿಕೆಯಾಗಿದೆ ಎನ್ನಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ 5 ಗಂಟೆಗಳ ಕಾಲ ಹೆದ್ದರಿ ರಸ್ತೆಯನ್ನು ಬಂದ್ ಮಾಡಲಾಯಿತು.
ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿತ್ತು ಎಂದು ತಿಳಿದು ಬಂದಿದೆ.
ಈ ವೇಳೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ, ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುವುದನ್ನು ನಿಯಂತ್ರಿಸಿ ಕಾರ್ಯಾಚರಣೆ ನಡೆಸಿದರು.
ಈ ಬಗ್ಗೆ ಹೊನ್ನಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.